Advertisement

Guarantee Plan: ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ; ಪರಮೇಶ್ವರ್‌

09:50 PM Jun 08, 2024 | Suhan S |

ಬೆಂಗಳೂರು: “ಗ್ಯಾರಂಟಿ ಯೋಜನೆಗಳನ್ನು ಘೋಷಿಸುವ ಮೊದಲೇ ಸಾಕಷ್ಟು ಚರ್ಚೆ ಮಾಡಲಾಗಿದೆ. ಗ್ಯಾರಂಟಿಗಳನ್ನು ನಿಲ್ಲಿಸುವುದು ಸೂಕ್ತವಲ್ಲ ಅಂತ ಈಗಾಗಲೇ ಸರ್ಕಾರ ಸ್ಪಷ್ಟಪಡಿಸಿದೆ. ಹಾಗಾಗಿ, ಈ ನಿಟ್ಟಿನಲ್ಲಿ ಅಪಸ್ವರದ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ಸ್ಪಷ್ಟಪಡಿಸಿದರು.

Advertisement

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಗ್ಯಾರಂಟಿ ಯೋಜನೆಗಳ ಜಾರಿಯಿಂದ ಒಂದಷ್ಟು ಹಣಕಾಸಿನ ತೊಂದರೆಯಾಗುತ್ತದೆ ಎಂಬುದು ಎಲ್ಲರಿಗೆ ಗೊತ್ತಿರುವ ವಿಚಾರ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಹಣ ಖರ್ಚು ಆಗುವಾಗ ಮರುಹೊಂದಾಣಿಕೆ ಮಾಡಬೇಕಾಗುತ್ತದೆ. ಇದನ್ನು ನಾವು ಮಾಡುತ್ತೇವೆ. ಅದು ನಮಗೆ ಗೊತ್ತಿದೆ. ಹಸಿದ ಹೊಟ್ಟೆಯಲ್ಲಿರುವ ಜನರಿಗೆ ಬೇರೆ ಯಾವ ಯೋಜನೆಗಳನ್ನು ಜಾರಿಗೆ ತಂದರೂ ಪ್ರಯೋಜನ ಆಗುವುದಿಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next