Advertisement
ದ.ಕ. ಜಿ.ಪಂ. ಸಭಾಂಗಣದಲ್ಲಿ ಬುಧವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ ರೇಶನ್ ಕಾರ್ಡ್‌ಗಳ ಆಧಾರದಲ್ಲಿ ಫಲಾನುಭವಿಗಳನ್ನು ಗುರುತಿಸಿ ಗುರಿ ನಿಗದಿಪಡಿಸಲಾಗಿತ್ತು. ದ.ಕ. ಜಿಲ್ಲೆಯಲ್ಲಿ ಹೀಗೆ ಗುರುತಿಸಲಾದ ಒಟ್ಟು 4,03,333 ಮಹಿಳೆಯರಲ್ಲಿ ಶೇ.92ರಷ್ಟು ಮಂದಿಗೆ (3,69,292) 2,000 ರೂ. ತಲುಪುತ್ತಿದೆ. ಶೇ.100ರಷ್ಟು ಗುರಿ ಸಾಧಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ದ.ಕ.ದಲ್ಲಿ ಸರಕಾರಿ ಬಸ್‌ಗಳ ಕೊರತೆ ಇರುವುದು ಗೊತ್ತಾಗಿದ್ದು, ಹೊಸದಾಗಿ 170 ರೂಟ್‌ಗಳಿಗೆ ಸರಕಾರಿ ಬಸ್ ಓಡಿಸುವ ಪ್ರಸ್ತಾವನೆಯನ್ನು ಸಾರಿಗೆ ಸಚಿವರಿಗೆ ಸಲ್ಲಿಸಲಾಗುವುದು ಎಂದು ಹೇಳಿದರು.
Related Articles
ಯೋಜನೆಗಳ ಫಲಾನುಭವಿಗಳೊಂದಿಗೆ ಪುಷ್ಪಾ ಸಂವಾದ ನಡೆಸಿದರು. ಬಂಟ್ವಾಳದ ಗಾಯತ್ರಿ ಅವರು ಮಾತನಾಡಿ, ಗೃಹಲಕ್ಷ್ಮಿ ಯೋಜನೆಯ 10 ಕಂತುಗಳ ಹಣವನ್ನು ಕೂಡಿಟ್ಟು ಒಬ್ಬ ಮಗನ ಶಾಲಾ ಶುಲ್ಕವನ್ನು ಭರಿಸಿದ್ದೇನೆ ಎಂದರು. ಮೂಡುಬಿದಿರೆಯ ಲಲಿತಾ ಮಾತನಾಡಿ, ಕೂಲಿ ಕೆಲಸ ಮಾಡಿ ಮೂರು ಮಕ್ಕಳಲ್ಲಿ ಒಬ್ಟಾಕೆಗೆ ಸಾಲ ಮಾಡಿ ಮದುವೆ ಮಾಡಿದ್ದೆ. ಮಗ ಅಂಗವಿಕಲ. ಇನ್ನೊಬ್ಬ ಮಗಳು ಇತ್ತೀಚೆಗೆ ಕೆಲಸಕ್ಕೆ ಸೇರಿದ್ದಾಳೆ. ಮಗನ ಔಷಧಕ್ಕೆ ತಿಂಗಳಿಗೆ 2,000 ರೂ. ಖರ್ಚಾಗುತ್ತಿತ್ತು. ಗೃಹಲಕ್ಷ್ಮಿ ಹಣ ಅದಕ್ಕೆ ಬಳಕೆಯಾಗುತ್ತಿದೆ ಎಂದರು.
Advertisement
ಜಿಲ್ಲಾಧಿಕಾರಿ ಮುಲ್ಲೆ„ ಮುಗಿಲನ್, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಜಿ.ಪಂ. ಸಿಇಒ ಡಾ| ಆನಂದ್, ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಉಪಸ್ಥಿತರಿದ್ದರು.