Advertisement

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

11:22 PM Nov 15, 2024 | Team Udayavani |

ಬೆಂಗಳೂರು:  ಗ್ಯಾರಂಟಿ ಯೋಜನೆಗಳ ಮೂಲಕ ಮತದಾರರಿಗೆ ಆಮಿಷವೊಡ್ಡಿ ಚುನಾವಣ ಅಕ್ರಮ ಎಸ ಗಿ ವರುಣಾ ವಿಧಾನಸಭಾ ಕ್ಷೇತ್ರದಿಂದ ಗೆದ್ದಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಡಿ. 6ಕ್ಕೆ ಮುಂದೂಡಿದೆ.

Advertisement

ಈ ವಿಚಾರವಾಗಿ ಮೈಸೂರಿನ ವರುಣಾ ಹೋಬಳಿಯ ಕೂಡನಹಳ್ಳಿ ಗ್ರಾಮದ ಕೆ.ಎಂ. ಶಂಕರ ಅವರು ಸಲ್ಲಿಸಿರುವ ಚುನಾವಣ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಎಸ್‌. ಸುನೀಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಲಿಖೀತ ವಾದಾಂಶಗಳನ್ನು ಸಲ್ಲಿಸಲು ಕಾಲಾವಕಾಶ ಕೋರಿದರು. ಅದನ್ನು ಪರಿಗಣಿಸಿದ ನ್ಯಾಯಪೀಠ ವಿಚಾರಣೆಯನ್ನು ಡಿ. 6ಕ್ಕೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next