ಹಾಸನ: ಕಾಂಗ್ರೆಸ್ ಸರ್ಕಾರ ಕೊಟ್ಟಿರುವ ಭರವಸೆ ಈಡೇರಿಸುವ ಭರದಲ್ಲಿ ಜನರಿಗೆ ಹೊರೆ, ಇನ್ನೊಂದೆಡೆ ಬರೆ ಹಾಕುವ ಕೆಲಸ ಆಗಬಾರದು ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಬಂದಿದೆ. ಬಿಜೆಪಿಗೆ ಹಿನ್ನಡೆಯಾಗಿದೆ, ಇದು ಬಿಜೆಪಿಗೆ ಹೊಸದೇನಲ್ಲ. ಜನರ ತೀರ್ಪನ್ನು ಒಪ್ಪಿ ವಿರೋಧ ಪಕ್ಷದಲ್ಲಿ ಕುಳಿತು ಯಶಸ್ವಿಯಾಗಿ ಕೆಲಸ ಮಾಡುತ್ತೇವೆ. ಆಡಳಿತ ಪಕ್ಷ ಎಡವಿದಾಗ ಕಿವಿ ಹಿಂಡಿ ಸರಿದಾರಿಗೆ ತರುತ್ತೇವೆ ಎಂದರು.
ಸಂಘ ಸಂಸ್ಥೆಗಳಿಗೆ ನೀಡಿರುವ ಭೂಮಿಯನ್ನು ಮರು ಪರಿಶೀಲನೆ ಮಾಡುತ್ತೇವೆ ಎನ್ನುತ್ತಿದ್ದಾರೆ. ನಮ್ಮ ಮೇಲೆ ಗೂಬೆ ಕೂರಿಸುವುದನ್ನು ಬಿಟ್ಟು ಜನಸಾಮಾನ್ಯರಿಗೆ ಒಳ್ಳೆಯದಾಗುವ ಕೆಲಸ ಮಾಡಬೇಕು ಎಂದರು.
ಇನ್ನೆರಡು ದಿನಗಳಲ್ಲಿ ವಿರೋಧ ಪಕ್ಷದ ನಾಯಕನ ಆಯ್ಕೆಯಾಗುತ್ತದೆ. ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಹೈಕಮಾಂಡ್ ತೀರ್ಮಾನಿಸುತ್ತೆ. ನಾನು ರಾಜ್ಯಾಧ್ಯಕ್ಷ ಆಗುವ ವಿಚಾರ ಚರ್ಚೆ ಆಗಿಲ್ಲ. ಜವಾಬ್ದಾರಿ ಕೊಟ್ಟರೂ ಸಮರ್ಥವಾಗಿ ಸಂಭಾಳಿಸಿ ಪಕ್ಷ ಕಟ್ಟುತ್ತೇವೆ.
-ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ