Advertisement
ಸುದ್ದಿಗಾರರೊಂದಿಗೆ ಮಾತನಾಡಿ, ಮಹಾರಾಷ್ಟ್ರ ಕಾಂಗ್ರೆಸ್ನವರು ಈ ಬಗ್ಗೆ ನಮ್ಮ ಜತೆ ಚರ್ಚೆಯನ್ನೇ ಮಾಡಿಲ್ಲ. ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳ ನಾಯಕರು ನಮ್ಮ ರಾಜ್ಯದ ಗ್ಯಾರಂಟಿ ಯೋಜನೆಗಳ ಬಗ್ಗೆ ಸುಳ್ಳು ಹೇಳಿಕೆ ನೀಡುತ್ತಿ ದ್ದಾರೆ. ಈ ಸುಳ್ಳು ಆರೋಪ ಮಾಡುತ್ತಿರುವ ನಾಯಕರು ರಾಜ್ಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಆಹ್ವಾನ ನೀಡುತ್ತಿದ್ದು, ಅವರಿಗಾಗಿ 30 ವಿಶೇಷ ಬಸ್ ಹಾಗೂ ವಿಮಾನ ಪ್ರಯಾಣ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.
ಸಚಿವರ ಮೇಲೆ ಹಲ್ಲೆಯಾಗಿದೆಯೇ ಎಂಬ ಪ್ರಶ್ನೆಗೆ, ಈ ರೀತಿ ಏನೂ ಆಗಿಲ್ಲ. ಎಲ್ಲವೂ ಸುಳ್ಳು. ಯಾರೋ ಕಪಾಳಕ್ಕೆ ಹೊಡೆದಿದ್ದಾರೆ ಎಂದು ಹೇಳುತ್ತಾರೆ. ಇದಕ್ಕೆಲ್ಲ ಆಧಾರ ಇದೆಯೇ? ಇಂತಹ ಆಧಾರರಹಿತ ಹೇಳಿಕೆ ನೀಡಲು ನಾನು ತಯಾರಿಲ್ಲ. ನಾನು ಹಿಟ್ ಆ್ಯಂಡ್ ರನ್ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.