Advertisement

ಭರವಸೆ ಈಡೇರಿಕೆ: ಬಹಿರಂಗ ಚರ್ಚೆಗೆ ಬನ್ನಿ

05:16 PM Jan 18, 2018 | Team Udayavani |

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆಯುವ ಮೂಲಕ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದು, ಈ ಬಗ್ಗೆ ಬಿಜೆಪಿ ನಾಯಕರೊಂದಿಗೆ ಬಹಿರಂಗ ಚರ್ಚೆಗೂ ಸಿದ್ಧವಿರುವುದಾಗಿ ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥ್‌ ಪಂಥಾಹ್ವಾನ ನೀಡಿದರು.

Advertisement

ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಬುಧವಾರ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರಿಗಾಗಿ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ಹಿಂದೆ ಆಡಳಿತ ನಡೆಸಿದ ಬಿಜೆಪಿ ಸರ್ಕಾರ ಕರ್ನಾಟಕ ಕಂಡ ಅತೀ ಭ್ರಷ್ಟ ಸರ್ಕಾರವಾಗಿದ್ದು, ಮುಖ್ಯಮಂತ್ರಿ ಸೇರಿದಂತೆ ಹಲವು ಸಚಿವರು ಭ್ರಷ್ಟಾಚಾರದ ಆರೋಪದಲ್ಲಿ ಜೈಲು
ಸೇರಿದ್ದರು. ಆದರೆ, ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಯಾವುದೇ ಭ್ರಷ್ಟಾಚಾರವಿಲ್ಲದ, ಸ್ವತ್ಛ ಸರ್ಕಾರವಾಗಿದ್ದು, ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಉತ್ತಮ ಆಡಳಿತ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಚುನಾವಣೆಗೂ ಮುನ್ನ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫ‌ಲವಾಗಿದ್ದು, ದೇಶದ ಪ್ರತಿಯೊಬ್ಬರ ಬ್ಯಾಂಕ್‌ ಖಾತೆಗೆ 15 ಲಕ್ಷ ರೂ. ಹಾಕುವುದಾಗಿ ಹೇಳಿದ್ದರು. ಆದರೆ, ಈವರೆಗೆ 15 ಪೈಸೆಯೂ ಬಂದಿಲ್ಲ ಎಂದು ಟೀಕಿಸಿದ ಅವರು, ಸಿದ್ದರಾಮಯ್ಯ ಅವರ ಸರ್ಕಾರ ನುಡಿದಂತೆ ನಡೆದಿದ್ದು, ಬೇಕಿದ್ದರೆ ಈ ಬಗ್ಗೆ ಬಿಜೆಪಿ ನಾಯಕರು ಬಹಿರಂಗ ಚರ್ಚೆಗೆ ಬರಬಹುದು ಎಂದು ಪಂಥಾಹ್ವಾನ ನೀಡಿದರು.

ಯೋಗಿ ವಿರುದ್ಧ ವಾಗ್ಧಾಳಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ವಿರುದ್ಧ ವಾಗ್ಧಾಳಿ ನಡೆಸಿದ ವಿಷ್ಣುನಾಥ್‌, ಆದಿತ್ಯನಾಥ್‌ ಸರ್ಕಾರ ಆಮ್ಲಜನಕ ಪೂರೈಕೆ ಮಾಡುವಲ್ಲಿ ವಿಫ‌ಲವಾಗಿದ್ದರಿಂದ ಉತ್ತರ ಪ್ರದೇಶದಲ್ಲಿ ಆಮ್ಲಜನಕ ಕೊರತೆಯಿಂದ ಹಲವು ಮಕ್ಕಳು ಅಸುನೀಗಿದ್ದವು, ಹೀಗಿದ್ದರೂ ಆದಿತ್ಯನಾಥ್‌ ಅವರು ಕರ್ನಾಟಕಕ್ಕೆ ಬಂದು ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಮಾತನಾಡುವುದು, ಅವರಿಗೆ ಸಲಹೆ ನೀಡುವುದು ಹಾಸ್ಯಾಸ್ಪದ ಸಂಗತಿ. ಯೋಗಿ ಆದಿತ್ಯನಾಥ್‌ ಅವರು ದ್ರೋಹಿ ಆದಿತ್ಯನಾಥ್‌ ಆಗಿದ್ದಾರೆ ಎಂದು ಕಿಡಿಕಾರಿದರು.

ಕೋಮುವಾದಿ ರಾಜಕೀಯ: ರಾಜ್ಯ ಬಿಜೆಪಿ ನಾಯಕರಿಗೆ ಕಾಂಗ್ರೆಸ್‌ ಸರ್ಕಾರದ ವೈಫ‌ಲ್ಯದ ಬಗ್ಗೆ ಮಾತನಾಡಲು ಯಾವುದೇ ವಿಷಯಗಳಿಲ್ಲದ ಕಾರಣ ರಾಜ್ಯದಲ್ಲಿ ಕೋಮುವಾದಿ ರಾಜಕೀಯ ಮಾಡುತ್ತಿದೆ. ಹೀಗಾಗಿ ರಾಜ್ಯಕ್ಕೆ ನರೇಂದ್ರ ಮೋದಿ, ಅಮಿತ್‌ ಶಾ, ಯೋಗಿ ಆದಿತ್ಯನಾಥ್‌ ಯಾರೇ ಬಂದರೂ ಯಾವುದೇ ಉಪಯೋಗವಿಲ್ಲ, ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ಸರ್ಕಾರ ಮತ್ತೂಮ್ಮೆ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಶೀಘ್ರದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‌
ಗಾಂಧಿ ರಾಜ್ಯಕ್ಕೆ ಆಗಮಿಸಲಿದ್ದು, ಈ ವೇಳೆ ಬಿಜೆಪಿ ನಾಯಕರ ಆರೋಪಗಳಿಗೆ ಉತ್ತರ ನೀಡಲಿದ್ದಾರೆ ಎಂದರು.

ಬಿಜೆಪಿ ಕನಸು ಹುಸಿ ಮಾಡಿ: ವರುಣಾ ಕ್ಷೇತ್ರದ ವಸತಿ ಜಾಗೃತಿ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ದೇಶವನ್ನು ಕಾಂಗ್ರೆಸ್‌ ಮುಕ್ತ ಮಾಡುವ ಕನಸು ಕಾಣುತ್ತಿರುವ ಬಿಜೆಪಿ ನಾಯಕರ ಕನಸನ್ನು ಹುಸಿಗೊಳಿಸುವ ನಿಟ್ಟಿನಲ್ಲಿ 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಮಾಡು ಇಲ್ಲವೇ ಮಡಿ ಹೋರಾಟ ಮಾಡಬೇಕಿದೆ. ಹೀಗಾಗಿ ಪಕ್ಷದ ಕಾರ್ಯಕರ್ತರು ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಬೇಕಿದ್ದು, ಬಿಜೆಪಿ ಯಾವ ಸಾಧನೆಯನ್ನು ಮಾಡದೆ ಸುಳ್ಳು ಪ್ರಚಾರ ಪಡೆಯುತ್ತಿದ್ದು, ಕಾಂಗ್ರೆಸ್‌ ಸರ್ಕಾರ ಬಡವರ, ರೈತರ, ಹಿಂದುಳಿದ ವರ್ಗದ ಜನರ ಪರವಾಗಿದ್ದರೂ, ಸರ್ಕಾರದ ಸಾಧನೆ ಬಗ್ಗೆ ಜನರಿಗೆ ತಲುಪಿಸಲು ಹಿಂದೆ ಬಿದ್ದಿದ್ದೇವೆ. ಹೀಗಾಗಿ ಸರ್ಕಾರದ ಸಾಧನೆಯನ್ನು ಜನರಿಗೆ ತಲುಪಿಸಲು ಪಕ್ಷದ ಕಾರ್ಯಕರ್ತರು ಶ್ರಮಿಸುವ ಮೂಲಕ 2018ರ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವಂತೆ ಮಾಡಬೇಕಿದ್ದು, ಇದರಿಂದ 2019ರ ಚುನಾವಣೆಯಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರವನ್ನು ಎದುರಿಸಲು ಸಾಧ್ಯವಾಗಲಿದೆ ಎಂದು ಹೇಳಿದರು.

Advertisement

ಕಾರ್ಯಾಗಾರಲ್ಲಿ ಕಾಂಗ್ರೆಸ್‌ ಮುಖಂಡ ಪ್ರೋ.ಬಿ.ಕೆ. ಚಂದ್ರಶೇಖರ್‌, ಮಾಜಿ ಶಾಸಕ ಎಂ.ಸತ್ಯನಾರಾಯಣ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ. ಬಿ.ಜೆ. ವಿಜಯಕುಮಾರ್‌, ಜಿಪಂ ಮಾಜಿ ಅಧ್ಯಕ್ಷ ಕೆ.ಮರಿಗೌಡ, ಕೆಪಿಸಿಸಿ ಕಾರ್ಯದರ್ಶಿ ಮಳವಳ್ಳಿ ಶಿವಣ್ಣ, ಮಹಿಳಾ ಘಟಕದ ಅಧ್ಯಕ್ಷೆ ನಂದಿನಿ ಚಂದ್ರಶೇಖರ್‌, ಜಿಪಂ ಸದಸ್ಯ ರಾಕೇಶ್‌ ಪಾಪಣ್ಣ, ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳ ಮಾನಸ ಇನ್ನಿತರರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next