Advertisement
ಸಿಎಂ ಮತ್ತು ಡಿಸಿಎಂ ಜತೆಗೆ ಸುದೀರ್ಘ ಮಾತುಕತೆ ನಡೆಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಮತ್ತು ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣು ಗೋಪಾಲ್ ಅವರು, ಸಚಿವರು, ಶಾಸಕರು ಅಧಿಕಾರ ಹಂಚಿಕೆ, ಸಿಎಂ, ಡಿಸಿಎಂ ವಿಷಯಗಳ ಬಗ್ಗೆ ನಿತ್ಯವೂ ಮಾಧ್ಯಮಗಳ ಮುಂದೆ ಹೇಳಿಕೆ ನೀಡುತ್ತಿರುವುದರಿಂದ ಗ್ಯಾರಂಟಿ ಯೋಜನೆಗಳು ಇಂಥ ಬೇಡವಾದ ವಿಷಯಗಳಲ್ಲಿ ಮುಳುಗಿ ಹೋಗಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಗೊತ್ತಾಗಿದೆ.
Related Articles
Advertisement
ಪಕ್ಷದ ಸಂಘಟನೆ ಬದಲಾವಣೆ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಅವರು, ಈ ವಿಚಾರ ವಾಗಿ ಚರ್ಚೆ ನಡೆಯುತ್ತಿದೆ. ಈ ವಿಚಾರವನ್ನು ಎಐಸಿಸಿ ಅಧ್ಯಕ್ಷರ ಗಮನಕ್ಕೆ ತರಲಾಗುವುದು. ಹಾಲಿ ಪದಾಧಿಕಾರಿಗಳ ಪೈಕಿ ಹಲವರು ಶಾಸಕರು, ಸಚಿವರಾಗಿದ್ದಾರೆ. ಅವರನ್ನು ಸಂಘಟನೆ ಜವಾಬ್ದಾರಿ ಯಿಂದ ಬಿಡುಗಡೆ ಮಾಡಬೇಕಿದೆ. ಯುವಕರು, ಹೊಸಬರಿಗೆ ಸಂಘಟನೆಯ ಜವಾಬ್ದಾರಿ ನೀಡಲು ಚಿಂತನೆ ನಡೆಸಲಾಗುತ್ತಿದೆ ಎಂದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಉಪಸ್ಥಿತರಿದ್ದರು.
ಸಚಿವರ ಕಾರ್ಯವೈಖರಿಗೆ ಗರಂ
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಸಲ್ಲಿಸುವಂತೆ ಉಸ್ತುವಾರಿ ಸಚಿವರಿಗೆ 2 ತಿಂಗಳ ಹಿಂದೆಯೇ ಎಐಸಿಸಿ ಸೂಚಿಸಿದ್ದರೂ ಇನ್ನೂ ಬಹುತೇಕರು ಪಟ್ಟಿ ಸಲ್ಲಿಸದಿರುವುದರ ಬಗ್ಗೆ ಗರಂ ಆಗಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, 2 ತಿಂಗಳಾದರೂ ಪಟ್ಟಿ ಕೊಟ್ಟಿಲ್ಲವೆಂದರೆ ಏನರ್ಥ? ರಾಜ್ಯದಲ್ಲೇ ಇದ್ದರೂ ಯಾಕೆ ಪ್ರವಾಸ ಮಾಡುತ್ತಿಲ್ಲವೆಂದು ಪ್ರಶ್ನಿಸಿದರು ಎನ್ನಲಾಗಿದೆ. 15 ದಿನಗಳೊಳಗೆ ಪೂರ್ಣ ಪಟ್ಟಿ ಸಲ್ಲಿಸಲು ತಿಳಿಸಲಾಗಿದೆ.