Advertisement
ಜಿಲ್ಲೆಯಲ್ಲಿ ಏಳು ತಾಲೂಕುಗಳಲ್ಲಿ ಜಿಲ್ಲಾ ಪಂಚಾಯಿತಿಯಿಂದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮೀಣ ಜನರಿಗೆ ಉದ್ಯೋಗ ಒದಗಿಸಲು ಎಲ್ಲ ಅನುಷ್ಠಾನ ಅಧಿಕಾರಿಗಳಿಗೆ ಜನರು ಉದ್ಯೋಗದ ಬೇಡಿಕೆ ನೀಡಿದ ತಕ್ಷಣ ಉದ್ಯೋಗ ಒದಗಿಸಲು ಹಾಗೂ ಸಕಾಲದಲ್ಲಿ ಕೂಲಿ ಪಾವತಿ ಮಾಡಲು ನಿರ್ದೇಶನ ನೀಡಲಾಗಿದೆ. ಈಗಾಗಲೇ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ. ಮೇ 6ವರೆಗೆ 25,872 ಕುಟುಂಬಗಳು ಬೇಡಿಕೆ ಸಲ್ಲಿಸಿದ್ದು, 24,833 ಕುಟುಂಬಗಳಿಗೆ ಉದ್ಯೋಗ ಒದಗಿಸಿ 2.36 ಲಕ್ಷ ಮಾನವ ದಿನಗಳ ಸೃಜನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
Related Articles
Advertisement
ಗ್ರಾಮ ಪಂಚಾಯಿತಿಗಳಿಂದ ವೈಯಕ್ತಿಕ ಕಾಮಗಾರಿಗಳಾದ ಕುರಿ, ದನದ ದೊಡ್ಡಿ (ಎಸ್‌ಸಿ ಮತ್ತು ಎಸ್‌ಟಿ ಕುಟುಂಬಗಳಿಗೆ ಮತ್ತು ಪ್ಯಾಕೇಜ್ ಮಾದರಿಯಲ್ಲಿ ಅನುಷ್ಠಾನಿಸಿದರೆ ಸಾಮಾನ್ಯ ಕುಟುಂಬಗಳಿಗೂ), ಭೂ-ಅಭಿವೃದ್ಧಿ ಮತ್ತು ಒಡ್ಡು, ಬದು ನಿರ್ಮಾಣ, ಇಂಗು ಗುಂಡಿ (ಕೊಳವೆ ಬಾವಿ ಮರುಪೂರಣ ಘಟಕ), ಹಂದಿ ದೊಡ್ಡಿ, ಕೊಳವೆ ಬಾವಿ ಮರುಪೂರಣ ಘಟಕ ಹಾಗೂ ಸಮುದಾಯ ಕಾಮಗಾರಿಗಳಾದ ಕೆರೆ ಅಭಿವೃದ್ಧಿ ಕಾಮಗಾರಿ (ಕೆರೆ ಹೂಳೆತ್ತುವುದು ಮತ್ತು ಪಿಚ್ಚಿಂಗ್), ಆಟದ ಮೈದಾನ ಅಭಿವೃದ್ಧಿ, ಸ್ಮಶಾನ ಅಭಿವೃದ್ಧಿ, ಗ್ರಾಮೀಣ ಗೋದಾಮು, ಮಲ್ಟಿ ಆರ್ಚ್ ಚೆಕ್ ಡ್ಯಾಂ, ಗ್ರಾಮೀಣ ಉದ್ಯಾನವನ ನಿರ್ಮಾಣ, ಅಂಗನವಾಡಿ ಕೇಂದ್ರ (ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ), ನಮ್ಮ ಹೊಲ ನಮ್ಮ ದಾರಿ (ಮಣ್ಣು ರಸ್ತೆ 200 ಮೀ.ಗೆ), ರೈತರ ಕಣ, ಸಂತೆ ಕಟ್ಟೆ, ಶಾಲಾ ಶೌಚಾಲಯ (ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ), ಶಾಲಾ ಕಾಂಪೌಂಡ, ಸಂಜೀವಿನಿ ಶೆಡ್, ರಾಜೀವಗಾಂಧಿ ಸೇವಾ ಕೇಂದ್ರ ಕಟ್ಟಡ, ಗೋಬರ್ ಗ್ಯಾಸ್ ಗುಂಡಿ ತೆಗೆಯುವುದು, ಜಾನುವಾರುಗಳಿಗೆ ಕುಡಿಯುವ ನೀರಿನ ತೊಟ್ಟಿ, ವಾಲ್ ಪೂಲ್ ಮಾದರಿ, ರಿರ್ಚಾ ವೆಲ್, ಇಂಜಕ್ಷನ್ ರೀಚಾರ್ಜ್ ವೆಲ್, ಕಲ್ಲು ತಡೆ, ಕುಡಿಯುವ ನೀರಿನ ಬೋರವೆಲ್ ರಿಚಾರ್ಜ್ ಪಿಟ್, ಸಮುದಾಯ ದನದ ದೊಡ್ಡಿ ನಿರ್ಮಾಣ ಮಾಡಲಾಗುವುದು ಎಂದರು.
ಈ ಯೋಜನೆಯಡಿ ಪಶು ಪಾಲನೆ ಮತ್ತು ಪಶು ವೈದ್ಯಕೀಯ ಇಲಾಖೆಯ ವತಿಯಿಂದ ಹಂದಿ ಶೆಡ್ಡು, ಅಜೋಲ ತೊಟ್ಟಿ, ಅರಣ್ಯ ಇಲಾಖೆ ವತಿಯಿಂದ ಸ್ವಂತ ಜಮೀನು ಮತ್ತು ಬದುಗಳಲ್ಲಿ ಸಿಲ್ವರ್, ಹೆಬ್ಬೇವು, ಹಲಸು, ಸಾಗವಾನಿ, ತೇಗ, ಮುಂತಾದ ಗಿಡಗಳನ್ನು, ಮೀನುಗಾರಿಕೆ ಇಲಾಖೆಯಿಂದ ಮೀನು ಕೃಷಿ ಹೊಂಡ, ರೇಷ್ಮೆ ಇಲಾಖೆಯಿಂದ ಹಿಪ್ಪು ನೆರಳೆ ನರ್ಸರಿ, ಹಿಪ್ಪು ನೆರಳೆ ನಾಟಿ ಜೋಡಿಸಾಲು ಪದ್ಧತಿ, ಹಿಪ್ಪು ನೆರಳೆ ಮರಗಡ್ಡಿ ವಿಧಾನ, ಕೃಷಿ ಇಲಾಖೆಯಿಂದ ಎರೆಹುಳು ತೊಟ್ಟಿ, ಭೂ ಅಭಿವೃದ್ಧಿ, ಕೃಷಿ ಹೊಂಡ ನಿರ್ಮಾಣಕ್ಕೆ ಅವಕಾಶವಿದೆ ಎಂದು ಜಿಪಂ ಸಿಇಓ ಲೀಲಾವತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.