Advertisement
ಗ್ಯಾರಂಟಿಗಳಿಂದ ರಾಜ್ಯ ಸರಕಾರ ದಿವಾಳಿಯಾಗಿದೆ. ಚುನಾವಣೆಯಲ್ಲಿ ಒಂದು ವೇಳೆ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಮತ ಚಲಾಯಿಸದಿದ್ದರೆ, ಲೋಕಸಭಾ ಚುನಾವಣೆ ಬಳಿಕ ಗ್ಯಾರಂಟಿಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಮತದಾರರಿಗೆ ವಿಶೇಷವಾಗಿ ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಮತದಾರರನ್ನು ಉದ್ದೇಶಿಸಿ ವಿಜಯೇಂದ್ರ ಈ ಹೇಳಿಕೆ ನೀಡಿದ್ದಾರೆ. ಈ ಮೂಲಕ ಮತದಾರರಿಗೆ ಬೆದರಿಕೆ ಹಾಕಲಾಗಿದೆ. ಇದು ಮಾದರಿ ನೀತಿಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದ್ದು, ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಆಯೋಗಕ್ಕೆ ನೀಡಿದ ದೂರಿನಲ್ಲಿ ಆಗ್ರಹಿಸಿದ್ದಾರೆ. Advertisement
Guarantees ತಾತ್ಕಾಲಿಕ; ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ದೂರು
01:15 AM Apr 21, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.