ಮಂಗಳೂರು: ಇನ್ನು ಮುಂದೆ ಸರಕಾರಿ ಕಚೇರಿ ಹೊರತು ಪಡಿಸಿ ಸಾರ್ವಜನಿಕ ಸ್ಥಳಗಳಲ್ಲಿ ತನಗೆ ಗಾರ್ಡ್ ಆಫ್ ಹಾನರ್ (ಗೌರವ ವಂದನೆ) ಕೊಡುವುದು ಬೇಡ ಎಂದು ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡು ಗುರುವಾರ ಬೆಳಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಸುದ್ದಿಗಾರರ ಜತೆ ಮಾತನಾಡಿದರು.
ಇಂದು ಪೊಲೀಸರು ಪೂರ್ವ ಸಿದ್ಧತೆ ಮಾಡಿಕೊಂಡು ಕಾಯುತ್ತಿದ್ದ ಕಾರಣ ವಿಮಾನ ನಿಲ್ದಾಣದಲ್ಲಿ ವ್ಯವಸ್ಥೆ ಮಾಡಿದ್ದ ಗಾರ್ಡ್ ಆಫ್ ಹಾನರ್‌ನ್ನು ಸ್ವೀಕರಿಸಿದ್ದೇನೆ. ಇನ್ನು ಮುಂದೆ ಸರಕಾರಿ ಕಚೇರಿ ಹೊರತುಪಡಿಸಿ ಇತರ ಸಾರ್ವಜನಿಕ ಸ್ಥಳಗಳಲ್ಲಿ ಗಾರ್ಡ್ ಆಫ್ ಹಾನರ್ ಬೇಡ ಎಂದರು.
ವಿಮಾನ ನಿಲ್ದಾಣ, ರೈಲು ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ ಗಾರ್ಡ್ ಆಫ್ ಹಾನರ್ ಕೊಡುವುದರಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತದೆ. ಸಾರ್ವಜನಿಕರಿಗೆ ತೊಂದರೆ ಆಗುವ ಕಡೆ ಗಾರ್ಡ್ ಆಫ್ ಹಾನರ್ ಬೇಡ. ಈ ಬಗ್ಗೆ ಅಧಿಸೂಚನೆ ಹೊರಡಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
ಇದನ್ನೂ ಓದಿ :ವಿಷ ಸೇವಿಸಿ ಆಸ್ಪತ್ರೆಗೆ ಚಿಕಿತ್ಸೆಗೆ ಬಂದ ವ್ಯಕ್ತಿಯಿಂದ ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ