ಗುಬ್ಬಿ : ಗಣರಾಜ್ಯೋತ್ಸವದ ಅಂಗವಾಗಿ ಗುರುವಾರ ಬೆಳಗ್ಗೆ ಪಟ್ಟಣ ಪಂಚಾಯಿತಿ ಕಚೇರಿ ಮುಂಭಾಗ ರಾಷ್ಟ್ರಧ್ವಜವನ್ನ ಹಾರಿಸಲಾಯಿತು. ನಿಯಮಾನುಸಾರ ರಾಷ್ಟ್ರಧ್ವಜವನ್ನು ಸೂರ್ಯಸ್ತಕ್ಕೆ ಮುಂಚೆ ಗೌರವಯುತವಾಗಿ ಕೆಳಗೆ ಇಳಿಸಬೇಕಾಗಿದ್ದ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗಳು ರಾತ್ರಿ 7.30 ಆದರೂ ರಾಷ್ಟ್ರಧ್ವಜವನ್ನ ಕೆಳಗೆ ಇಳಿಸದೆ ಅಪಮಾನ ಎಸಗಿದ್ದಾರೆ.
ಇದನ್ನು ಗಮನಿಸಿದ ಸಾರ್ವಜನಿಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಲೋಪ ಎಸೆಗಿರುವ ಅಧಿಕಾರಿಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದ್ದಾರೆ.ವಿಷಯ ತಿಳಿದ ನಂತರ ಕಚೇರಿಯ ಸಿಬಂದಿ ಸ್ಥಳಕ್ಕೆ ಆಗಮಿಸಿ, ಆತುರಾತುರವಾಗಿ ರಾಷ್ಟ್ರಧ್ವಜವನ್ನು ಕೆಳಗೆ ಇಳಿಸಿ ನಾಪತ್ತೆಯಾಗಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಿ.ಎನ್ ಅಣ್ಣಪ್ಪಸ್ವಾಮಿ ಮಾತನಾಡಿ, ಅಧಿಕಾರಿಗಳು ರಾಷ್ಟ್ರಧ್ವಜವನ್ನ ನಿಯಮಾನುಸಾರವಾಗಿ ಗೌರವ ಸೂಚಿಸಿ ಸೂರ್ಯಸ್ತಮಾನಕ್ಕೂ ಮುಂಚೆ ಕೆಳಗೆ ಇಳಿಸದೆ ಕರ್ತವ್ಯ ಲೋಪ ಎಸಗಿದ್ದು ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.