ಗುಂಡ್ಲುಪೇಟೆ(ಚಾಮರಾಜನಗರ): ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಟ್ಟಣದ ಹೊರ ವಲಯದ ಸೆಲ್ ಪೆಟ್ರೋಲ್ ಬಂಕ್ ಬಳಿ ಶುಕ್ರವಾರ ನಡೆದಿದೆ.
ನಂಜನಗೂಡು ತಾಲೂಕಿನ ಸಿದ್ದನಯ್ಯನಹುಂಡಿ ಗ್ರಾಮದ ಸಂಮೃದ್ದಿ(22) ಮೃತ ಮಹಿಳೆಯಾಗಿದ್ದು, ಈಕೆಯ ಪತಿ ಬೆಂಗಳೂರು ಮೂಲದ ನಾಗೇಂದ್ರ(30) ಸ್ಥಿತಿ ಚಿಂತಾಜನಕವಾಗಿದೆ.
ಗಾಯಾಳು ನಾಗೇಂದ್ರ ಅವರನ್ನು ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಊಟಿ ಪ್ರವಾಸ ಮುಗಿಸಿ ಮೈಸೂರು ಕಡೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ.
ಗುಂಡ್ಲುಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಮಹಿಳೆಯ ಮೃತ ದೇಹವನ್ನು ಪಟ್ಟಣದ ಸಾರ್ವಜನಿಕ ಅಸ್ಪತ್ರೆಗೆ ರವಾನಿಸಿದ್ದಾರೆ.
Related Articles
ಘಟನೆ ಸಂಬಂಧಿಸಿದಂತೆ ಪೊಲೀಸರು ತಮಿಳುನಾಡು ಮೂಲದ ಲಾರಿ ಹಾಗೂ ಚಾಲಕ ಕಬೀರ್ ನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.