ದಾವಣಗೆರೆ: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ 2019-20ನೇ ಶೈಕ್ಷಣಿಕ ಸಾಲಿನಲ್ಲಿ ಕಾರ್ಯ ನಿರ್ವಹಿಸಿದ ಅತಿಥಿ ಉಪನ್ಯಾಸಕರನ್ನೇ 2020-21ನೇ ಶೈಕ್ಷಣಿಕ ಸಾಲಿನಲ್ಲೂ ಯಥಾಸ್ಥಿತಿಯಲ್ಲಿ ಮುಂದುವರಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿ ಪದಾಧಿಕಾರಿಗಳು ಗುರುವಾರ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
ಸಮಿತಿ ರಾಜ್ಯಾಧ್ಯಕ್ಷ ಎಚ್. ಕೊಟ್ರೇಶ್‌ಮಾತನಾಡಿ, ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 14,183 ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದು, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ಶೇ. 50ರಷ್ಟು (7091) ಅತಿಥಿ ಉಪನ್ಯಾಸಕರನ್ನ ತುರ್ತಾಗಿ ಆಯ್ಕೆ ಮಾಡಿಕೊಳ್ಳಲು ಆರ್ಥಿಕಇಲಾಖೆ ಸಮ್ಮತಿ ನೀಡಿದೆ. ಅದರಂತೆ ಕ್ರಮ ವಹಿಸಲು ಆದೇಶ ಮಾಡಿದ್ದಾರೆ. ಹಾಗಾಗಿ ಹಲವಾರು ವರ್ಷಗಳಿಂದ ಕನಿಷ್ಠ ಗೌರವಧನದಿಂದ ಸೇವೆ ಸಲ್ಲಿಸುತ್ತಿವ ಅತಿಥಿ ಉಪನ್ಯಾಸಕರು ಸಂಕಷ್ಟಕ್ಕೀಡಾಗಿದ್ದಾರೆಎಂದರು.
ಇದನ್ನೂ ಓದಿ : ರಾಯಚೂರು: ಕಾಲುವೆ ನೀರಿಗಾಗಿ ರಸ್ತೆ ಸಂಚಾರ ತಡೆದು ಪ್ರತಿಭಟನೆ
ಶೇ. 50 ರಷ್ಟು ಅತಿಥಿ ಉಪನ್ಯಾಸಕರು ಸೇವೆಯಲ್ಲಿ ಮುಂದುವರಿಯಲು ಸಾಧ್ಯವಾಗುತ್ತಿಲ್ಲ ಎಂಬ ಅಳಲು ಒಂದೆಡೆಯಾದರೆ, ಮತ್ತೂಂದು ಕಡೆ ವಿದ್ಯಾರ್ಥಿಗಳ ಭವಿಷ್ಯ ಕೂಡ ಅತಂತ್ರ ಸ್ಥಿತಿಯಲ್ಲಿದೆ. ಕಾಲೇಜು ಶಿಕ್ಷಣ ಇಲಾಖೆ ಪ್ರಥಮದರ್ಜೆ ಕಾಲೇಜುಗಳಲ್ಲಿ ಈ ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕಾರ್ಯನಿರ್ವಹಿಸಿದ ಅತಿಥಿ ಉಪನ್ಯಾಸಕರನ್ನೇ ಮುಂದುವರಿಸಲು ಈಗಿನ ಆದೇಶವನ್ನು ಹಿಂಪಡೆದು ಕ್ರಮಜರುಗಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾಡಳಿತದ ಮೂಲಕ ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್. ಅಶ್ವತ್ಥನಾರಾಯಣ ಅವರಿಗೆ ಮನವಿ ಸಲ್ಲಿಸಲಾಯಿತು. ಹಿತರಕ್ಷಣಾ ಸಮಿತಿಯ ಪದಾ ಧಿಕಾರಿಗಳಾದ ಡಾ| ಎಂ. ಪ್ರಭಾಕರ, ಪಿ. ಮಂಜುಳಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ವಿ. ಸಿದ್ದಮ, ¾ ಸದಸ್ಯರಾದ ಡಿ.ಪಿ. ಗಂಗಾಧರ, ಗೋವಿಂದ ರೆಡ್ಡಿ, ಕೆ.ಆರ್. ಉಷಾ, ಆಶಾ, ಧನಂಜಯಮೂರ್ತಿ, ವಿನಯ್. ಎಂ.ಬಿ. ರವಿಕುಮಾರ್, ಗಜೇಂದ್ರ, ನಿಂಗಪ್ಪ, ಹುಲಿಕುಂಟೇಶ್ವರ, ಡಾ| ದೇವೇಂದ್ರಪ್ಪ, ಹಸೀನಾ ಬೇಗಂ, ತೂಪಣ್ಣ ಇತರರು ಇದ್ದರು.
ಇದನ್ನೂ ಓದಿ :‘ಇನ್ಸ್‌ಪೆಕ್ಟರ್ ವಿಕ್ರಂ’ ರೆಡಿ ಟು ರಿಪೋರ್ಟಿಂಗ್ …