Advertisement

ಅತಿಥಿ ಉಪನ್ಯಾಸಕರ ಅಹೋರಾತ್ರಿ ಧರಣಿಗೆ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳ ಬೆಂಬಲ

04:33 PM Jan 04, 2022 | Team Udayavani |

ಗಂಗಾವತಿ: ಸೇವಾ ಭದ್ರತೆ ಹಾಗೂ ಪ್ರತಿ ತಿಂಗಳು ವೇತನ ಬಿಡುಗಡೆಗೆ ಆಗ್ರಹಿಸಿ ಪದವಿಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಅಹೋರಾತ್ರಿ ಧರಣಿ ಪ್ರತಿಭಟನೆಗೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ನಗರದ ವಿವಿಧ ಕಾಲೇಜುಗಳ 1000 ಕ್ಕೂ ಅಧಿಕ ವಿದ್ಯಾರ್ಥಿಗಳು ನಗರದ ಕೊಲ್ಲಿನಾಗೇಶ್ವರರಾವ್ ಸರಕಾರಿ ಮಹಾವಿದ್ಯಾಲಯದ ಎದುರು ಪ್ರತಿಭಟನೆ ನಡೆಸಿ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.

Advertisement

ಎಬಿವಿಪಿ ಜಿಲ್ಲಾ ಸಂಚಾಲಕ ಸರ್ವಜ್ಞಮೂರ್ತಿ ಮಾತನಾಡಿ, ಕಳೆದ  25 ವರ್ಷಗಳಿಂದ ಅತಿಥಿ ಉಪನ್ಯಾಸಕರು ಕಡಿಮೆ ವೇತನಕ್ಕೆ ಸೇವಾ ಭದ್ರತೆ ಇಲ್ಲದೇ ಕೆಲಸ ಮಾಡಿ ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಮಾಡುತ್ತಿದ್ದಾರೆ. ಸರಕಾರ ಅತಿಥಿ ಉಪನ್ಯಾಸಕರನ್ನು ಕೂಡಲೇ ಖಾಯಂ ಗೊಳಿಸಬೇಕು. ಕುಟುಂಬ ನಿರ್ವಹಣೆ ಮಾಡಲು ಅನುಕೂಲವಾಗುವಂತೆ ವೇತನ ಪರಿಷ್ಕರಣೆ ಮಾಡಬೇಕು. ಶಿಕ್ಷಣ ಸಚಿವರು ಅತಿಥಿ ಉಪನ್ಯಾಸಕರು ಇಷ್ಟ ಇದ್ದರೆ ಕೆಲಸ ಮಾಡಲಿ ಇಲ್ಲದಿದ್ದರೆ ಬೇರೆ ಕಡೆ ಹೋಗಲಿ ಎನ್ನುವ ಹೇಳಿಕೆ ನೀಡಿರುವುದು ಸರಿಯಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಗ್ರಾಮೀಣ ಮಕ್ಕಳು ಇದೀಗ ಹೆಚ್ಚಿನ ಪ್ರಮಾಣದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರ ಸೇವೆ ಅವಶ್ಯವಾಗಿದೆ. ಅವರಿಗೆ ಸೇವಾ ಭದ್ರತೆ ನೀಡುವಂತೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕಿ ಲಕ್ಷ್ಮಮ್ಮ ಭೋಸ್ಲೆ, ಲಿಂಗರಾಜ್, ಅಂಬರೀಶ, ಬಸವರಾಜ, ಶರಣಬಸವ,ಪ್ರವೀಣ ಸೇರಿ ಅನೇಕ ವಿದ್ಯಾರ್ಥಿ ಮುಖಂಡರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next