Advertisement

ಅತಿಥಿ ಉಪನ್ಯಾಸಕರ ನೇಮಕ: ಶೀಘ್ರವೇ 2ನೇ ಸುತ್ತಿನ ಕೌನ್ಸೆಲಿಂಗ್‌

08:34 PM Feb 19, 2022 | Team Udayavani |

ಬೆಂಗಳೂರು: ಇತ್ತೀಚೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಬೋಧನೆ ಮಾಡಲು ನೇಮಕ ಮಾಡಿಕೊಂಡ ಅತಿಥಿ ಉಪನ್ಯಾಸಕರು ಕಾಲೇಜು ಸ್ಥಳ ಆಯ್ಕೆ ಮಾಡಿಕೊಳ್ಳುವ ಸಂಬಂಧ ಎರಡನೇ ಸುತ್ತಿನ ಕೌನ್ಸೆಲಿಂಗ್‌ ಪ್ರಕ್ರಿಯೆ ಅನ್ನು ಸದ್ಯದಲ್ಲಿಯೇ ನಡೆಸಲಾಗುವುದು ಎಂದು ಕಾಲೇಜು ಶಿಕ್ಷಣ ಇಲಾಖೆ ತಿಳಿಸಿದೆ.

Advertisement

2021-22ನೇ ಶೈಕ್ಷಣಿಕ ಸಾಲಿನಲ್ಲಿ 15 19 ಗಂಟೆಗಳ ಕಾರ್ಯಭಾರಕ್ಕೆ ಅನುಗುಣವಾಗಿ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುವ ಅತಿಥಿ ಉಪನ್ಯಾಸಕರು ಹಲವು ಕಾರಣಗಳನ್ನು ನೀಡಿ ಕಾಲೇಜು ಬದಲಾವಣೆ ಬಯಸಿ ಅರ್ಜಿ ಸಲ್ಲಿಸಿದ್ದಾರೆ. ಹೀಗೆ ಅರ್ಜಿ ಸಲ್ಲಿಸಲು ಬಯಸುವವರು ಫೆ.21ರ ಸಂಜೆ 4 ಗಂಟೆಯೊಳಗೆ ಹಂಚಿಕೆಯಾಗಿರುವ ಕಾಲೇಜು ಪ್ರಾಂಶುಪಾಲರಿಗೆ ಅರ್ಜಿ ಸಲ್ಲಿಸಬೇಕು.

ಇಂತಹ ಅರ್ಜಿಗಳನ್ನು ಇಎಂಐಎಸ್‌ ನಲ್ಲಿ ರಿಜೆಕ್ಟ್‌ನಲ್ಲಿ ನಮೂದಿಸಿ “ಫ‌ರ್ಗೋ ಪ್ರಸೆಂಟ್‌ ಕಾಲೇಜು’ ಕಾರಣವನ್ನು ಆಯ್ಕೆ ಮಾಡಿ ಅಪ್‌ಲೋಡ್‌ ಮಾಡಿ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕು. ಮೊದಲ ಸುತ್ತಿನ ಕೌನ್ಸೆಲಿಂಗ್‌ನಲ್ಲಿ ಕಾಲೇಜು ಆಯ್ಕೆ ಮಾಡಿಕೊಂಡು ಕರ್ತವ್ಯಕ್ಕೆ ಹಾಜರಾಗದ ಅಭ್ಯರ್ಥಿಗಳ ಕಾರ್ಯಭಾರವನ್ನು ಸೇರ್ಪಡೆ ಮಾಡಿ ಮುಂದಿನ ಸುತ್ತಿನ ಕೌನ್ಸೆಲಿಂಗ್‌ ನಡೆಸಲಾಗುವುದು ಎಂದು ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

ಇದನ್ನೂ ಓದಿ : ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ : ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Advertisement

Udayavani is now on Telegram. Click here to join our channel and stay updated with the latest news.

Next