Advertisement

ಸೇವಾ ಭದ್ರತೆಗೆ ಒತ್ತಾಯಿಸಿ ಅತಿಥಿ ಉಪನ್ಯಾಸಕರ ಧರಣಿ

10:41 AM Jan 05, 2018 | Team Udayavani |

ಕಲಬುರಗಿ: ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸೇವಾ ಭದ್ರತೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ನೇತೃತ್ವದಲ್ಲಿ ಧರಣಿ ನಡೆಸಲಾಯಿತು.

Advertisement

ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದ ಧರಣಿನಿರತರು, ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಳೆದ ಅನೇಕ ವರ್ಷಗಳಿಂದ ಅರೆಕಾಲಿಕ, ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಯಾವುದೇ ಸೇವಾ ಭದ್ರತೆಯಿಲ್ಲದೇ ಅತಂತ್ರ ಸ್ಥಿತಿಯಲ್ಲಿ ಜೀವನ ಸಾಗಿಸುತ್ತಿದ್ದಾರೆ.

ಸೇವೆ ಸಲ್ಲಿಸುತ್ತಿರುವ ಬಹುತೇಕರ ಉಪನ್ಯಾಸಕರ ವಯೋಮಿತಿ ಮೀರಿದೆ. ಸರ್ಕಾರದ ಯಾವುದೇ ನೌಕರರಿಗೆ ಅರ್ಜಿ ಸಲ್ಲಿಸಲು ಸಹ ಅವಕಾಶವಿಲ್ಲ. ಈ ಬಗ್ಗೆ ಹಲವಾರು ವರ್ಷದಿಂದ ಸಂಬಂಧಿಸಿದ ಅಧಿಕಾರಿಗಳು, ಸಚಿವರು ಹಾಗೂ
ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು ಈ ವರೆಗೆ ಯಾವ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

2016-17ನೇ ಸಾಲಿನ ಎರಡೂವರೆ ತಿಂಗಳ ಹಾಗೂ ಪ್ರಸಕ್ತ 2017-18ರ ಸಾಲಿನ ಒಂದು ಸೆಮಿಷ್ಟರ್‌ ಮುಗಿದು ಎರಡನೇ ಸೆಮಿಸ್ಟರ್‌ ಆರಂಭವಾದರೂ ಈ ವರೆಗೆ ವೇತನ ನೀಡಿಲ್ಲ. ವೇತನ ನೀಡುವ ಜತೆಗೆ ಸೇವಾ ಭದ್ರತೆ ನೀಡಬೇಕು ಎಂದು ಒತ್ತಾಯಿಸಿದರು. ಸಂಘದ ಅಧ್ಯಕ್ಷ ಜಗಪ್ಪ ತಳವಾರ, ಭಗವಾನಸಿಂಗ ರಜಪೂತ, ಅಣವೀರಪ್ಪ ಬೋಳೆವಾಡ, ರಮೇಶ ಕವಡೆ ಪ್ರತಿಭಟನೆಯಲ್ಲಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next