Advertisement

ಪಿಯು ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ

10:48 PM Jan 15, 2022 | Team Udayavani |

ಬೆಂಗಳೂರು: ಸರಕಾರಿ ಪಿಯು ಕಾಲೇಜುಗಳ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ “ಕೆರಿಯರ್‌ ಕೌನ್ಸೆಲಿಂಗ್‌’ ನಡೆಸಲು ಪದವಿಪೂರ್ವ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.

Advertisement

ಇಂಥ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಕೆರಿಯರ್‌ ಕೌನ್ಸೆಲಿಂಗ್‌ ಮಹತ್ವದ್ದಾಗಿದೆ. ಹೆಚ್ಚಿನ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದಲ್ಲಿ ಯಾವ ಕೋರ್ಸ್‌ ಪಡೆಯಬೇಕೆಂಬ ಬಗ್ಗೆ ಮಾಹಿತಿ ಇರುವುದಿಲ್ಲ. ಆದ್ದರಿಂದ ಅದಕ್ಕೆ ಪೂರಕವಾಗಿ ಕೌನ್ಸೆಲಿಂಗ್‌ ನಡೆಸಲಾಗುತ್ತದೆ. ಸಮಾಜ ಕಲ್ಯಾಣ ಇಲಾಖೆ ಯಲ್ಲಿರುವ ಎಸ್‌ಇಪಿ/ಟಿಎಸ್‌ಪಿ ಅನುದಾನ ದಿಂದ ಈ ಕೌನ್ಸೆಲಿಂಗ್‌ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಕೌನ್ಸೆಲಿಂಗ್‌ ಸ್ವರೂಪ
ಖಾಸಗಿ ಕಾಲೇಜುಗಳಲ್ಲಿ ವೃತ್ತಿಪರ ಕೋರ್ಸ್‌ಗಳ ಪ್ರವೇಶದ ವೇಳೆ ನಡೆಸುವ ಕೌನ್ಸೆಲಿಂಗ್‌ ಮಾದರಿ ಯಲ್ಲೇ ಪಿಯು ಕಾಲೇಜು ಗಳ ಕೌನ್ಸೆಲಿಂಗ್‌ ಇರಲಿದೆ. ಆರ್ಥಿಕ, ಸಾಮಾಜಿಕ ಸ್ಥಿತಿಗತಿ, ಪಾಲಕ/ಪೋಷಕರ ಪರಿಸ್ಥಿತಿಗಳನ್ನು ಅರಿತು ವಿದ್ಯಾರ್ಥಿಗಳನ್ನು ಉನ್ನತ ಶಿಕ್ಷಣಕ್ಕೆ ಸಿದ್ಧಗೊಳಿಸುವ ಉದ್ದೇಶ ಇದರದ್ದಾಗಿದೆ. ಜತೆಗೆ ಸರಕಾರದಿಂದ ಸಿಗುವ ಸಾಲ ಸೌಲಭ್ಯಗಳನ್ನು ಯಾವ ರೀತಿ ಬಳಸಿಕೊಳ್ಳಬಹುದು ಎಂಬ ಬಗ್ಗೆಯೂ ತಿಳಿಸಲಾಗುವುದು.

ಕೌನ್ಸೆಲಿಂಗ್‌ ಪ್ರಕ್ರಿಯೆಯನ್ನು ನಾಲ್ಕು ಹಂತಗಳಲ್ಲಿ ನಡೆಸಲಾಗುತ್ತದೆ. ಮೊದಲ ಹಂತದಲ್ಲಿ ವಿದ್ಯಾರ್ಥಿಗಳು ಯಾವ ಕೆಲಸ ಹಾಗೂ ಯಾವ ಕೋರ್ಸ್‌ ಸೇರಲು ಬಯಸುತ್ತಿದ್ದಾರೆ? ವಿದ್ಯಾರ್ಥಿಗಳ ಸಾಮರ್ಥ್ಯವೇನು? ಭಾಷಾ ಕೌಶಲ, ಸಂವಹನ ಯಾವ ರೀತಿಯಲ್ಲಿದೆ ಎಂಬ ಮಾಹಿತಿ ಕಲೆ ಹಾಕಲಾಗುತ್ತದೆ.

ಇದನ್ನೂ ಓದಿ:ಮುಷ್ಕರ ಬಿಟ್ಟು ಬೋಧನೆಗೆ ಹಿಂದಿರುಗಿ : ಅತಿಥಿ ಉಪನ್ಯಾಸಕರಿಗೆ ಸಚಿವರ ಮನವಿ

Advertisement

ಎರಡನೇ ಹಂತದಲ್ಲಿ ಆಯ್ಕೆಗಳು, ಅವಕಾಶಗಳ ಬಗ್ಗೆ ಮಾಹಿತಿ ನೀಡಲಾಗುವುದು. ಮೂರನೇ ಹಂತದಲ್ಲಿ ವಿದ್ಯಾರ್ಥಿಗಳಿಗೆ ಸ್ಪರ್ಧಾ ತ್ಮಕ ಪರೀಕ್ಷೆ ಮಾದರಿಯಲ್ಲಿ ಪರೀಕ್ಷೆ ನಡೆಸುವುದು. ನಾಲ್ಕನೇ ಹಂತದಲ್ಲಿ ಫ‌ಲಿತಾಂಶ ಪ್ರಕಟಿಸಲಾಗುವುದು. ಈ ಫ‌ಲಿತಾಂಶ ಆಧರಿಸಿ ಆಯ್ಕೆ ಮಾಡಿಕೊಳ್ಳಬೇಕಾದ ಕೋರ್ಸ್‌ಗಳ ಬಗ್ಗೆ ಸಲಹೆ ನೀಡಲಾಗುವುದು.

ಸರಕಾರಿ ಶಾಲೆ-ಕಾಲೇಜುಗಳ ಹೆಚ್ಚಿನ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಕೋರ್ಸ್‌ ಆಯ್ಕೆ ಮಾಹಿತಿ ಇರುವುದಿಲ್ಲ. ಹೀಗಾಗಿ, ಸೂಕ್ತ ಮಾರ್ಗದರ್ಶನ ನೀಡುವುದಕ್ಕಾಗಿ ಕೆರಿಯರ್‌ ಕೌನ್ಸೆಲಿಂಗ್‌ ನಡೆಸಲಾಗುವುದು.
– ಆರ್‌. ಸ್ನೇಹಲ್‌, ಪಿಯು ಇಲಾಖೆ ನಿರ್ದೇಶಕಿ

 

Advertisement

Udayavani is now on Telegram. Click here to join our channel and stay updated with the latest news.

Next