Advertisement

G. Parameshwara ನಿಗಮ, ಮಂಡಳಿಗಳ ನಿರ್ದೇಶಕರ ನೇಮಕಕ್ಕೆ ಮಾರ್ಗಸೂಚಿ ಅಂತಿಮ

12:21 AM Jul 27, 2024 | Team Udayavani |

ಬೆಂಗಳೂರು: ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ನಿರ್ದೇಶಕರನ್ನು ನೇಮಿಸುವ ಸಂಬಂಧ ಮಾರ್ಗ ಸೂಚಿಯೊಂದನ್ನು ಸಿದ್ಧಪಡಿಸಿ ಬಹುತೇಕ ಅಂತಿಮ ಗೊಳಿಸಲಾಗಿದೆ.

Advertisement

ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಮಿತಿಯು ಶುಕ್ರವಾರ ಸಭೆ ಸೇರಿ ರಾಜ್ಯದ 75ಕ್ಕೂ ಹೆಚ್ಚು ನಿಗಮ, ಮಂಡಳಿಗಳಲ್ಲಿ ಖಾಲಿ ಇರುವ 1,400 ಕ್ಕೂ ಹೆಚ್ಚು ನಿರ್ದೇಶಕರ ನೇಮಕಕ್ಕೆ ಸಂಬಂಧಪಟ್ಟಂತೆ ಅನುಸರಿಸಬೇಕಾದ ಮಾನದಂಡಗಳನ್ನು ಸಮಾಲೋಚಿಸಿ ಪ್ರಮುಖವಾಗಿ 5 ಮಾರ್ಗಸೂಚಿಗಳನ್ನು ಅಂತಿಮಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

– ರಾಜ್ಯದ ಎಲ್ಲ ಜಿಲ್ಲೆ ಹಾಗೂ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೂ ಪ್ರಾತಿನಿಧ್ಯ ಕೊಡಬೇಕು.
– ಪರಿಶಿಷ್ಟರು, ಹಿಂದುಳಿದ ವರ್ಗ, ಮಹಿಳೆಯರು ಸೇರಿದಂತೆ ಸಾಮಾನ್ಯ ವರ್ಗದವರಿಗೂ ಅವಕಾಶ ಕಲ್ಪಿಸುವ ಮೂಲಕ ಸಾಮಾಜಿಕ ನ್ಯಾಯ ಎತ್ತಿ ಹಿಡಿಯಬೇಕು
-ಸಾರ್ವಜನಿಕ ಜೀವನದಲ್ಲಿದ್ದು ಪಕ್ಷ ಸಂಘಟನೆಗೆ ಶ್ರಮಿಸಿದ ಹಿರಿಯರು ಜತೆಗೆ ಇದುವರೆಗೂ ಅವಕಾಶ ಸಿಗದವರನ್ನು ಗುರುತಿಸುವುದು
-ಶಾಸಕರು, ವಿಧಾನ ಪರಿಷತ್ತಿನ ಸದಸ್ಯರು, ಸಂಸದರು, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರು, ಜಿಲ್ಲಾ ಉಸ್ತುವಾರಿ ಸಚಿವರ ಶಿಫಾರಸುಗಳನ್ನು ಪರಿಗಣಿಸುವುದು
– ನಿಗಮ, ಮಂಡಳಿಗಳ ಕಾರ್ಯ ಚಟುವಟಿಕೆಗಳ ಬಗ್ಗೆ ಸಾಮಾನ್ಯ ತಿಳಿವಳಿಕೆ ಇರಬೇಕು.

Advertisement

Udayavani is now on Telegram. Click here to join our channel and stay updated with the latest news.

Next