Advertisement

ದಸರಾ ಆಚರಣೆಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

12:17 PM Oct 05, 2021 | Team Udayavani |

ಮೈಸೂರು: ನಾಡ ಹಬ್ಬ ದಸರಾ ಆಚರಣೆಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟಿಸಲಾಗಿದೆ. ಕೋವಿಡ್ ಕಾರಣದಿಂದ ಈ ಬಾರಿಯೂ ಸರಳ ದಸರಾ ಆಚರಣೆ ನಡೆಯುತ್ತಿದ್ದು, ಮೈಸೂರು ಹೊರತುಪಡಿಸಿ ರಾಜ್ಯದ ಬೇರೆಡೆ ಕಾರ್ಯಕ್ರಮಗಳಲ್ಲಿ 400 ಕ್ಕಿಂತ ಹೆಚ್ಚು ಜನರು ಒಮ್ಮೆಗೆ ಸೇರುವಂತಿಲ್ಲ ಎಂದು ಸರ್ಕಾರ ಆದೇಶಿಸಿದೆ.

Advertisement

ಮೈಸೂರು ಪ್ರತ್ಯೇಕ ಮತ್ತು ಮೈಸೂರು ಹೊರತುಪಡಿಸಿ ರಾಜ್ಯದ ಇತರ ಭಾಗಗಳಿಗೆ ಅನ್ವಯವಾಗುವಂತೆ ಎರಡು ಮಾರ್ಗಸೂಚಿ ಪ್ರಕಟಿಸಲಾಗಿದೆ.

ಮೈಸೂರು:

ಅರಮನೆ ಆವರಣದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಬಳಕೆ, ಸ್ಯಾನಿಟೈಸರ್ ಬಳಕೆ ಕಡ್ಡಾಯ

ಅ.7ರಂದು ಚಾಮುಂಡಿ ಬೆಟ್ಟದಲ್ಲಿ ನಡೆಯುವ ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ 100 ಜನರಿಗೆ ಮಾತ್ರ ಪ್ರವೇಶ. ಪ್ರತಿದಿನದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 500 ಜನರಿಗೆ ಮಾತ್ರ ಭಾಗವಹಿಸಲು ಅವಕಾಶ.

Advertisement

ಇದನ್ನೂ ಓದಿ: ದೆಹಲಿಗೆ ಹೊರಟ ಸಿದ್ದರಾಮಯ್ಯ: ಹೈಕಮಾಂಡ್ ಜೊತೆ ಮಹತ್ವದ ಚರ್ಚೆ

ಅ.15ರಂದು ನಡೆಯುವ ಜಂಬೂ ಸವಾರಿ/ ಪಂಜಿನ ಕವಾಯತಿಗೆ 500 ಜನರಿಗೆ ಮಾತ್ರ ಅವಕಾಶ.

ಆಚರಣೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಅಧಿಕಾರಿಗಳು, ಸಿಬ್ಬಂದಿ, ಕಲಾವಿದರು, ರಕ್ಷಣಾ ಸಿಬ್ಬಂದಿಗಳು ಅ.4ರ ನಂತರ ಮಾಡಿಸಿದಿ ಆರ್ ಟಿಪಿಸಿಆರ್ ವರದಿ ಮತ್ತು ಕನಿಷ್ಠ ಒಂದು ಡೋಸ್ ಲಸಿಕೆ ಪಡೆದಿರುವುದನ್ನು ಕಡ್ಡಾಯಗೊಳಿಸಬೇಕು.

ಇತರೆಡೆ:

ರಾಜ್ಯದ ಇತರೆಡೆ ಆಚರಣೆಯ ಸಂದರ್ಭದಲ್ಲಿ 400ಕ್ಕಿಂತ ಜನರು ಒಮ್ಮೆಲೆ ಸೇರುವಂತಿಲ್ಲ. ಸಾಮಾಜಿಕ ಅಂತರ ಕಡ್ಡಾಯ ಪಾಲಿಸಬೇಕು.

ಕೋವಿಡ್ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next