Advertisement

ರಾಜ್ಯದಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸಲು ಮಾರ್ಗಸೂಚಿ ಬಿಡುಗಡೆ

07:37 PM Nov 09, 2020 | Mithun PG |

ಬೆಂಗಳೂರು: 2020-21ನೇ ಸಾಲಿನ ಶೈಕ್ಷಣಿಕ ಕಾರ್ಯಚಟುವಟಕೆಗಳನ್ನು ಪ್ರಾರಂಭಿಸಲು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಕೋವಿಡ್ 19 ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಯುಜಿಸಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

Advertisement

ಕೋವಿಡ್ 19 ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ಪ್ರಮಾಣಿತ ಕಾರ್ಯಾಚರಣಾ ವಿಧಾನ ಹೀಗಿದೆ.

1) ಸ್ನಾತಕೋತ್ತರ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ದಿನಾಂಕ 17-11-2020 ರಿಂದ ಭೌತಿಕ ತರಗತಿಗಳು ಆರಂಭವಾಗುವುದು. ಕಾಲೇಜಿಗೆ ಬಂದು ತರಗತಿಗಳಿಗೆ ಹಾಜರಾಗಲು ಸಿದ್ದರಿರುವ ವಿದ್ಯಾರ್ಥಿಗಳು. ಪೊಷಕರು ಸಹಿ ಮಾಡಿದ ಒಪ್ಪಿಗೆ  ಪತ್ರ ತರಬೇಕಾಗುತ್ತದೆ.

2) ತರಗತಿಗಳನ್ನು ನಡೆಸುವಾಗ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಕಾಲೇಜಿನಲ್ಲಿ ಲಬ್ಯವಿರುವ ಒಟ್ಟು ತರಗತಿ ಕೊಠಡಿಗಳ ಸಂಖ್ಯೆಗೆ ಅನುಗುಣವಾಗಿ ಆರೋಗ್ಯ ಇಲಾಖೆಯಿಂದ ಹೊರಡಿಸಲಾಗಿರುವ ಮತ್ತು ಪ್ರಸ್ತುತ ಮಾರ್ಗಸೂಚಿಗಳ ಪ್ರಕಾರ ದೈಹಿಕ ಅಂತರವನ್ನು ಕಾಪಾಡಿಕೊಂಡು ಸುರಕ್ಷಿತವಾಗಿ ತರಗತಿಗಳನ್ನು ನಡೆಸಲು ಅವಶ್ಯವಿರುವಂತೆ ತರಗತಿ ವೇಳಾಪಟ್ಟಿಯನ್ನು ಕಾಲೇಜಿನ ಹಂತದಲ್ಲಿಯೇ ಸಿದ್ದಪಡಿಸಿಕೊಳ್ಳುವುದು.

3) ಭೋಧನಾ, ಪ್ರಯೋಗಾಲಯ ಮತ್ತು ಪ್ರಾಜೆಕ್ಟ್ ತರಗತಿಗಳನ್ನು, ಅವಶ್ಯವಿದ್ದಲ್ಲಿ ಶಿಫ್ಟ್ ಸಿಸ್ಟಂ (Shift system) ಮೇರೆಗೆ ನಡೆಸುವುದು.

Advertisement

4) ಭೌತಿಕ ತರಗತಿಗಳಿಗೆ ಹಾಜರಾಗಲು ಇಚ್ಚಿಸದ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿಗಳನ್ನು ನಡೆಸುವುದು. ಮಾತ್ರವಲ್ಲದೆ ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಬಗ್ಗೆ ಇರುವ ಅನುಮಾನ ಅಥವಾ ಸಮಸ್ಯೆಯನ್ನು ನಿವಾರಿಸಲು Contact classes  ನಡೆಸುವುದು.

ಇದನ್ನೂ ಓದಿ: ಮಲ್ಪೆ: ಸಮುದ್ರದಲ್ಲಿ ಮುಳುಗುತ್ತಿದ್ದ ಯುವತಿಯ ರಕ್ಷಿಸಲು ಹೋದ ಯುವಕನೂ ನೀರುಪಾಲು; ರಕ್ಷಣೆ

5) ತರಗತಿಗಳನ್ನು ನಡೆಸುವ ಸಂದರ್ಭದಲ್ಲಿ ಪ್ರಸ್ತುತ ಮಾರ್ಗಸೂಚಿಗಳ ಪ್ರಕಾರ ದೈಹಿಕ ಅಂತರವನ್ನು ಕಾಪಾಡಿಕೊಂಡು ಸುರಕ್ಷಿತವಾಗಿ ತರಗತಿಗಳನ್ನು ನಡೆಸಲು ಅವಶ್ಯವಿರುವಂತೆ ತರಗತಿ ವೇಳಾ ಪಟ್ಟಿಯನ್ನು ಕಾಲೇಜಿನ ಹಂತದಲ್ಲಿಯೇ ಸಿದ್ದಪಡಿಸಿಕೊಳ್ಳುವುದು.

6) ಎಲ್ಲಾ ಅಧ್ಯಾಪಕರು ತಮ್ಮ ತರಗತಿಗಳ ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಕುರಿತು ಮುಂದಿನ ಕನಿಷ್ಟ ಒಂದು ತಿಂಗಳ ಅಧ್ಯಯನ ಸಾಮಾಗ್ರಿಗಳನ್ನು ಪ್ರತಿ Period/Session  ಗೆ ಸಂಬಂಧಿಸಿದಂತೆ ತಯಾರಿಸಿ ವಿದ್ಯಾರ್ಥಿಗಳಿಗೆ ಟೆಲಿಗ್ರಾಂ/ ಇಮೇಲ್/ ವಾಟ್ಸಾಪ್ ಮೂಲಕ ಕಡ್ಡಾಯವಾಗಿ  ನೀಡುವುದು. ಸದರಿ ಅಧ್ಯಯನ ಸಾಮಾಗ್ರಿ ಕಾಲೇಜಿನ ವೆಬ್ ಸೈಟ್ ನಲ್ಲಿ ಕಡ್ಡಾಯವಾಗಿ ಅಪ್ಲೋಡ್ ಮಾಡತಕ್ಕದ್ದು.

ಇದನ್ನೂ ಓದಿ: ಈ ಸರ್ಕಾರದಲ್ಲಿ ಉಪಕುಲಪತಿ ಪದವಿಯನ್ನು ಮಾರಾಟಕ್ಕೆ ಇಡಲಾಗಿದೆ: ಡಿಕೆ ಶಿವಕುಮಾರ್

ಸ್ನಾತಕೋತ್ತರ ಮತ್ತು ಅಂತಿಮ ವರ್ಷ ಹೊರತುಪಡಿಸಿ ಇತರೆ ವಿದ್ಯಾರ್ಥಿಗಳಿಗೆ:

  • ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿಗಳನ್ನು ನಡೆಸುವುದು.
  • ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಬಗ್ಗೆ ಇರುವ ಅನುಮಾನ ಅಥವಾ ಸಮಸ್ಯೆಯನ್ನು ನಿವಾರಿಸಲು ಪ್ರತಿ ದಿನ Contact classes  ನಡೆಸುವುದು.
  • ಎಲ್ಲಾ ಅಧ್ಯಾಪಕರು ತಮ್ಮ ತರಗತಿಗಳ ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಕುರಿತು ಮುಂದಿನ ಕನಿಷ್ಟ ಒಂದು ತಿಂಗಳ ಅಧ್ಯಯನ ಸಾಮಾಗ್ರಿಗಳನ್ನು ಪ್ರತಿ Period/Session  ಗೆ ಸಂಬಂಧಿಸಿದಂತೆ ತಯಾರಿಸಿ ವಿದ್ಯಾರ್ಥಿಗಳಿಗೆ ಟೆಲಿಗ್ರಾಂ/ ಇಮೇಲ್/ ವಾಟ್ಸಾಪ್ ಮೂಲಕ ಕಡ್ಡಾಯವಾಗಿ  ನೀಡುವುದು. ಸದರಿ ಅಧ್ಯಯನ ಸಾಮಾಗ್ರಿ ಕಾಲೇಜಿನ ವೆಬ್ ಸೈಟ್ ನಲ್ಲಿ ಕಡ್ಡಾಯವಾಗಿ ಅಪ್ಲೋಡ್ ಮಾಡತಕ್ಕದ್ದು.
  • ತರಗತಿಗಳನ್ನು ನಡೆಸುವ ಸಂದರ್ಭದಲ್ಲಿ ಪ್ರಸ್ತುತ ಮಾರ್ಗಸೂಚಿಗಳ ಪ್ರಕಾರ ದೈಹಿಕ ಅಂತರವನ್ನು ಕಾಪಾಡಿಕೊಂಡು ಸುರಕ್ಷಿತವಾಗಿ ತರಗತಿಗಳನ್ನು ನಡೆಸಲು ಅವಶ್ಯವಿರುವಂತೆ ತರಗತಿ ವೇಳಾ ಪಟ್ಟಿಯನ್ನು ಕಾಲೇಜಿನ ಹಂತದಲ್ಲಿಯೇ ಸಿದ್ದಪಡಿಸಿಕೊಳ್ಳುವುದು.

ಆನ್ ಲೈನ್ ಅಥವಾ ತರಗತಿಗೆ ನೇರವಾಗಿ ಹಾಜರಾಗುವ ವಿದ್ಯಾರ್ಥಿಗಳು ಆನ್ ಕ್ಯಾಂಪಸ್ ಮತ್ತು ಆಫ್ ಕ್ಯಾಂಪಸ್ ಹಾಸ್ಟೆಲ್ ನಲ್ಲಿ ಉಳಿದುಕೊಳ್ಳಬಹುದು.

ಇದನ್ನೂ ಓದಿ:  ಕಾವೇರಿ ನದಿಯಲ್ಲಿ ಪ್ರಿವೆಡ್ಡಿಂಗ್ ಫೋಟೊಶೂಟ್‌: ತೆಪ್ಪ ಮುಳುಗಿ ಜೋಡಿ ಸಾವು

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next