ಬೆಂಗಳೂರು: ಪ್ರೌಢಶಾಲಾ ವಿದ್ಯಾರ್ಥಿಗಳ ಭೌತಿಕ ತರಗತಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿರುವ ಬೆನ್ನಲ್ಲೇ ಪದವಿ ಪೂರ್ವ ಶಿಕ್ಷಣ ಇಲಾಖೆ ಪಿಯುಸಿ ಭೌತಿಕ ತರಗತಿಗಳ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಶೇ. 50ರಷ್ಟು ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಿದೆ. ಬ್ಯಾಚ್‌ಗಳನ್ನಾಗಿ ಮಾಡಿ, ದಿನ ಬಿಟ್ಟು ದಿನ ಒಂದೊಂದು ಬ್ಯಾಚ್‌ಗೆ ತರಗತಿ ಮಾಡಲು ಮುಂದಾಗಿದೆ.
ಕೊರೊನಾ ಪಾಸಿಟಿವಿಟಿ ದರ ಶೇ. 2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಆಗಸ್ಟ್ 23ರಿಂದ ಪಿಯುಸಿ ಭೌತಿಕ ತರಗತಿಗಳು ಆರಂಭವಾಗಲಿದೆ. ಪಾಸಿಟಿವಿಟಿ ದರ ಶೇ. 2ಕ್ಕಿಂತ ಹೆಚ್ಚಿರುವ ಜಿÇÉೆಗಳಲ್ಲಿ ಆನ್‌ಲೈನ್, ಪೂರ್ವ ಮುದ್ರಿತ ವಿಡಿಯೋ ಬೋಧನೆ ಮುಂದುವರಿಸುವಂತೆ ಇಲಾಖೆ ತಿಳಿಸಿದೆ.
ಅಪರಾಹ್ನ 7, 8ನೇ ತರಗತಿಗೆ ಬೋಧನೆ!
ಪ್ರೌಢಶಾಲಾ ಮಕ್ಕಳಿಗೆ ಬೆಳಗ್ಗಿನ ಅವಧಿಯಲ್ಲಿ ತರಗತಿಗಳು ನಡೆಯಲಿದ್ದು, ಮಧ್ಯಾಹ್ನದ ಅವಧಿಯಲ್ಲಿ 7 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ತರಗತಿ ನಡೆಸುವ ಬಗ್ಗೆ ಸರಕಾರ ಚಿಂತನೆ ನಡೆಸುತ್ತಿದೆ.
ಆ. 23ರಿಂದ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ಆರಂಭವಾಗಲಿದ್ದು (ಶೇ. 2ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವಲ್ಲಿ ಮಾತ್ರ) ಮಧ್ಯಾಹ್ನದ ಬಳಿಕ 7 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ತರಗತಿ ನಡೆಸುವ ಸಂಬಂಧ ತೀರ್ಮಾನ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಯುತ್ತಿದೆ. ಕೊರೊನಾ ಸಂಬಂಧಿಸಿದಂತೆ ತಜ್ಞರ ವರದಿ ಹಾಗೂ ಅಭಿಪ್ರಾಯ ಆಧಾರಿಸಿ ಸರಕಾರವೇ ಈ ಬಗ್ಗೆ ಅಂತಿಮ ನಿರ್ಧಾರ ಪ್ರಕಟಿಸಲಿದೆ ಎಂದು ಮೂಲಗಳು ತಿಳಿಸಿವೆ.