Advertisement

ಕರ್ಫ್ಯೂ ಇದ್ದರೂ ಹುಟ್ಟುಹಬ್ಬ ಆಚರಿಸಿ ಪಟಾಕಿ ಸಿಡಿಸಿದ ಪೊಲೀಸ್ ಮಗ : 14 ಮಂದಿ ಬಂಧನ

01:02 PM Apr 25, 2021 | Team Udayavani |

ರಾಜ್ ಕೋಟ್ ; ನೈಟ್ ಕರ್ಫ್ಯೂ ಇದ್ದರೂ ಸಾರ್ವಜನಿಕ ಪ್ರದೇಶದಲ್ಲಿ ಹುಟ್ಟು ಹಬ್ಬವನ್ನು ಆಚರಿಸಿ, ಪಟಾಕಿ ಸಿಡಿಸಿದ ಹಿನ್ನೆಲೆಯಲ್ಲಿ ಗುಜರಾತಿನ ರಾಜ್ ಕೋಟ್ ನಲ್ಲಿ ಶನಿವಾರ ರಾತ್ರಿ 14 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ವಿಷಯ ಏನಂದ್ರೆ ಒಬ್ಬ ಪೊಲೀಸ್ ಅಧಿಕಾರಿಯ ಮಗನೇ ಈ ಬರ್ತ್ ಡೇ ಪಾರ್ಟಿಯನ್ನು ಪೊಲೀಸ್ ಕ್ವಾರ್ಟಸ್ ನಲ್ಲಿ ಆಯೋಜನೆ ಮಾಡಿದ್ದ. ಈ ವೇಳೆ ಪಟಾಕಿಯನ್ನೂ ಸಿಡಿಸಲಾಗಿತ್ತು. ಈ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಆರೋಪಿಗಳನ್ನು ಬಂಧಿಸಿದ್ದಾರೆ.

ಮತ್ತೊಂದು ಘಟನೆ ಕೂಡ ರಾಜ್ ಕೋಟ್ ನಲ್ಲಿ ನಡೆದಿದ್ದು, NGOದಲ್ಲಿ ಕೆಲಸ ಮಾಡುವ ಸದಸ್ಯರು ಶಾಲಾ ಆವರಣದಲ್ಲಿ ಹುಟ್ಟು ಹಬ್ಬವನ್ನು ಆಚರಿಸಿದ್ದಾರೆ. ಈ ಸಂಭ್ರಮದ ಕೆಲವು ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಕೂಡ ಶೇರ್ ಮಾಡಲಾಗಿದೆ. ಇದೇ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದ ಪೊಲೀಸರು ಎರಡೂ ಘಟನೆಯಿಂದ ಒಟ್ಟು 14 ಮಂದಿಯನ್ನು ಬಂಧನ ಮಾಡಿದ್ದಾರೆ.

ಗುಜರಾತ್‌ನಲ್ಲಿ ಕೊರೊನಾ ವೈರಸ್ ಪ್ರಕರಣಗಳು ತೀವ್ರವಾಗಿ ಏರಿರುವ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಏಪ್ರಿಲ್ 30 ರವರೆಗೆ 20 ನಗರಗಳಲ್ಲಿ ರಾತ್ರಿ 8 ರಿಂದ ಬೆಳಿಗ್ಗೆ 6 ರವರೆಗೆ ಕರ್ಫ್ಯೂ ವಿಧಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next