Advertisement

3 ಅಂತಸ್ತಿನ ಅಪಾರ್ಟ್ ಮೆಂಟ್ ಕುಸಿದು ಬಿದ್ದು ನಾಲ್ವರ ಸಾವು, ಹಲವರು ಅವಶೇಷದಡಿ

09:26 AM Aug 11, 2019 | Team Udayavani |

ಅಹಮದಾಬಾದ್: ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ನಾಲ್ಕು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಗುಜರಾತ್ ನ ಖೇಡಾ ಜಿಲ್ಲೆಯ ಪ್ರತಾಪ್ ನಗರದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

Advertisement

ಭಾರೀ ಮಳೆಯಿಂದಾಗಿ ಹೌಸಿಂಗ್ ಬೋರ್ಡ್ ನ ಬಹುಕಟ್ಟಡ ಕುಸಿದು ಬಿದ್ದಿದ್ದು, ಅವಶೇಷಗಳಡಿಯಲ್ಲಿ ಏಳೆಂಟು ಮಂದಿ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆದರೆ ಭಾರೀ ಮಳೆ ಮತ್ತು ನೀರು ತುಂಬಿಕೊಂಡಿದ್ದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾಗುತ್ತಿದೆ ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next