ಜನತಾ ದಳ (ಯು) ಬಂಡಾಯ ನಾಯಕ ಛೋಟು ವಾಸವ, ಪಟಿದಾರ್ ಆಂದೋಲನದ ನಾಯಕ ಹಾರ್ದಿಕ್ ಪಟೇಲ್, ಒಬಿಸಿ ನಾಯಕ ಅಲ್ಪೇಶ್ ಠಾಕೂರ್, ದಲಿತ ಹೋರಾಟಗಾರ ಜಿಗ್ನೇಶ್ ಮೇವಾನಿ ಈ ಮಹಾ ಮೈತ್ರಿಕೂಟದಲ್ಲಿ ಸೇರಿಕೊಳ್ಳುವ ಸಾಧ್ಯತೆಯಿದೆ.
Advertisement
ಗುಜರಾತಿನಲ್ಲಿ ಕಾಂಗ್ರೆಸ್ ನೇತೃತ್ವದ ಮಹಾಮೈತ್ರಿ ಕೂಟ ರಚನೆಯಾಗುತ್ತಿರುವುದನ್ನು ರಾಜ್ಯದ ಕಾಂಗ್ರೆಸ್‌ನಾಯಕರೊಬ್ಬರು ದೃಢಪಡಿಸಿದ್ದಾರೆ. ಮಹಾಮೈತ್ರಿ ಕೂಟ ರಚನೆಯಾಗುತ್ತಿರುವುದ ನಿಜ. ಇದಕ್ಕಾಗಿಯೇ ರಾಹುಲ್ ಗಾಂಧಿ ಮುಂದಿನ ತಿಂಗಳು ಗುಜರಾತ್‌ಗೆಆಗಮಿಸಲಿದ್ದಾರೆ. ಆದರೆ ಮೈತ್ರಿಯ ಸ್ವರೂಪ ಹೇಗಿರುತ್ತದೆ ಎನ್ನುವುದು ಇನ್ನೂ ಅಂತಿಮಗೊಂಡಿಲ್ಲ. ಮಹಾ ಮೈತ್ರಿ ಕೂಟ ರಚನೆಯಾದರೆ ಸೀಟು ಹಂಚಿಕೆಯ ಮೇಲೆ ಪ್ರಭಾವವಾಗುತ್ತದೆ ಎಂದವರು ಹೇಳಿದ್ದಾರೆ.
ಕಟ್ಟು ಸಮೂಹದ ಪ್ರಬಲ ನಾಯಕ ವಾಸವ ಗುಜರಾತಿ ನಲ್ಲಿ ಜೆಡಿ(ಯು) ಮುಖವಾಗಿ ಗುರುತಿಸಿಕೊಂಡಿದ್ದಾರೆ. ಶರದ್ ಯಾದವ್ ನೇತೃತ್ವದ ಜೆಡಿ(ಯು) ಬಣ ಅವರನ್ನು ಇತ್ತೀಚೆಗೆ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಮಾತುಕತೆಯ ಜವಾಬ್ದರಿ ವಹಿಸಿದೆ. ಈ ಸಲ ಗುಜರಾತಿನಲ್ಲಿ ಬಿಜೆಪಿ ಆಳ್ವಿಕೆಯನ್ನು ಕೊನೆಗಾಣಿಸಿ ಮೋದಿ -ಶಾ ಜೋಡಿಗೆ ತವರು ರಾಜ್ಯದಲ್ಲೇ ಮುಖಭಂಗ ಮಾಡುವ ಮೂಲಕ 2019ರ ಲೋಕಸಭಾ ಚುನಾವಣೆಗೆ ಆತ್ಮಸ್ಥೈರ್ಯ ಹೆಚ್ಚಸಿಕೊಳ್ಳಲು ಕಾಂಗ್ರೆಸ್ ತೀವ್ರ ಪ್ರಯತ್ನ ಮಾಡುತ್ತಿದೆ. ಉಪಾಧ್ಯಕ್ಷ ರಾಹುಲ್ ಗಾಂಧಿ ಪದೇ ಪದೇ ಗುಜರಾತ್‌ಗೆ ಭೇಟಿ ನೀಡಿ ಕಾರ್ಯಕರ್ತರಲ್ಲಿ ಹುರಪು ತುಂಬುವ ಕೆಲಸ ಮಾಡುತ್ತಿದ್ದಾರೆ.