ನವದೆಹಲಿ: ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಶನಿವಾರ (ಸೆಪ್ಟೆಂಬರ್ 11) ದಿಢೀರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಮಾಧ್ಯಮದ ವರದಿಗಳು ತಿಳಿಸಿವೆ.
ಇದನ್ನೂ ಓದಿ:ದಕ್ಷಿಣ ಆಫ್ರಿಕಾ ತಂಡದಲ್ಲಿ ಆಡಿದ್ದ ಡೇವಿಡ್ ವೀಸ್ ಈ ಬಾರಿ ನಮೀಬಿಯಾ ತಂಡದ ಪರ ಕಣಕ್ಕೆ
ವಿಜಯ್ ರೂಪಾನಿ ಅವರು ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ. ರಾಜೀನಾಮೆ ಬಳಿಕ ಪ್ರತಿಕ್ರಿಯೆ ನೀಡಿರುವ ಅವರು, ಈವರೆಗೆ ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸುವೆ. ಮುಂದೆ ಪಕ್ಷ ಯಾವುದೇ ಜವಾಬ್ದಾರಿ ನೀಡಿದರು ಅದನ್ನು ನಿರ್ವಹಿಸುವುದಾಗಿ ಹೇಳಿದರು.
2016ರ ಆಗಸ್ಟ್ 7ರಂದು ಗುಜರಾತ್ ಮುಖ್ಯಮಂತ್ರಿಯಾಗಿ ವಿಜಯ್ ರೂಪಾನಿ ಪ್ರಮಾಣವಚನ ಸ್ವೀಕರಿಸಿದ್ದರು. ಐದು ವರ್ಷಗಳ ಕಾಲ ಗುಜರಾತ್ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದ ರೂಪಾನಿ ಇಂದು ದಿಢೀರ್ ಆಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇತ್ತೀಚೆಗಿನ ಕೆಲವು ತಿಂಗಳಲ್ಲಿ ಅಧಿಕಾರದಿಂದ ಕೆಳಗಿಳಿದ ಬಿಜೆಪಿಯ ಮೂರನೇ ಮುಖ್ಯಮಂತ್ರಿಯಾಗಿದ್ದಾರೆ. ಜುಲೈ ತಿಂಗಳಿನಲ್ಲಿ ಬಿಎಸ್ ಯಡಿಯೂರಪ್ಪ ಕರ್ನಾಟಕದ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ನಂತರ ಉತ್ತರಾಖಂಡ್ ನ ತಿರತ್ ಸಿಂಗ್ ರಾವತ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.