ನವದೆಹಲಿ/ಅಹಮದಾಬಾದ್: ಗುಜರಾತ್ ಮುಖ್ಯಮಂತ್ರಿ ವಿಜಯ ರೂಪಾಣಿ (64 )ಅವರಿಗೆ ಕೊರೊನಾ ದೃಢಪಟ್ಟಿದೆ. ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಸದ್ಯ ಸಿಎಂ ಆರೋಗ್ಯ ಸ್ಥಿರವಾಗಿದೆ ಎಂದು ಡಿಸಿಎಂ ನಿತಿನ್ ಪಟೇಲ್ ಸೋಮವಾರ ಹೇಳಿದ್ದಾರೆ.
ಭಾನುವಾರ ವಡೋದರಾದಲ್ಲಿ ಆಯೋಜಿಸಲಾಗಿದ್ದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡುತ್ತಿದ್ದ ವೇಳೆ ರೂಪಾಣಿ ಕುಸಿದು ಬಿದ್ದಿದ್ದರು. ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರ ರಾತ್ರಿಯೇ ಸಿಎಂ ಅವರನ್ನು ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಿದ ಬಳಿಕ ಸೋಂಕು ದೃಢವಾಗಿದೆ. ಇಸಿಜಿ, ರಕ್ತ ಪರೀಕ್ಷೆಗಳ ಫಲಿತಾಂಶದಲ್ಲಿ ಕಳವಳ ಪಡುವ ವಿಚಾರವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಇದನ್ನೂ ಓದಿ:ಚಮೋಲಿ ದುರ್ಘಟನೆ : ಮೃತರ ಸಂಖ್ಯೆ 56ಕ್ಕೆ ಏರಿಕೆ
50 ವರ್ಷ ಮೇಲ್ಪಟ್ಟವರಿಗೆ ಲಸಿಕೆ: ಮುಂದಿನ 2-3 ವಾರಗಳಲ್ಲಿ 50 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ಏಳು ದಿನಗಳ ಅವಧಿಯಲ್ಲಿ 188 ಜಿಲ್ಲೆಗಳಲ್ಲಿ ಹೊಸ ಸೋಂಕು ಪತ್ತೆಯಾಗಿಲ್ಲ. 21 ದಿನಗಳಲ್ಲಿ 21 ಜಿಲ್ಲೆಗಳಲ್ಲಿಯೂ ಹೊಸ ಸೋಂಕು ದೃಢಪಟ್ಟಿಲ್ಲವೆಂದರು. ಲಸಿಕೆ ಹಾಕಿಸಿಕೊಂಡರೂ ಮಾಸ್ಕ್ ಧರಿಸುವುದನ್ನು ಮುಂದುವರಿಸಬೇಕು ಎಂದು ಹೇಳಿದ್ದಾರೆ. ಇದರ ಜತೆಗೆ 2-3 ತಿಂಗಳ ಅವಧಿಯಲ್ಲಿ ಮತ್ತಷ್ಟು ಲಸಿಕೆಗಳನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಹರ್ಷವರ್ಧನ್ ಹೇಳಿದ್ದಾರೆ. ಮತ್ತೂಂದೆಡೆ, ಅರುಣಾಚಲ ಪ್ರದೇಶ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದಲ್ಲಿ ಹೊಸ ಸೋಂಕು ಪ್ರಕರಣಗಳು ದೃಢಪಟ್ಟಿಲ್ಲ,
ಇದೇ ವೇಳೆ ಗಾಜು, ಪ್ಲಾಸ್ಟಿಕ್ ಮೇಲೆ ಹೆಚ್ಚಿನ ಅವಧಿಯ ಕಾಲ ಸೋಂಕು ಇರಲಿದೆ ಎಂದು ಐಐಟಿ ಬಾಂಬೆ ನಡೆಸಿದ ಸಂಶೋಧನೆಯಲ್ಲಿ ಕಂಡುಕೊಂಡಿದೆ.