ನವದೆಹಲಿ:ಗುಜರಾತ್ ನ ಪಾಟಿದಾರ್ ಸಮುದಾಯದ ಮುಖಂಡ ಹಾರ್ದಿಕ್ ಪಟೇಲ್ ಬುಧವಾರ (ಮೇ 18) ಕಾಂಗ್ರೆಸ್ ಪಕ್ಷದ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆಬಿದ್ದಂತಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಗುಜರಾತ್ ನ ಕಾರ್ಖಾನೆಯಲ್ಲಿ ಗೋಡೆ ಕುಸಿತ; ಕನಿಷ್ಠ 12 ಮಂದಿ ಸಾವು
ನಾನು ಕಾಂಗ್ರೆಸ್ ಪಕ್ಷದ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದೇನೆ ಎಂದು ಪಟೇಲ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ. ಗುಜರಾತ್ ಕಾಂಗ್ರೆಸ್ ನ ಕಾರ್ಯಕಾರಿ ಸಮಿತಿಯ ಅಧ್ಯಕ್ಷ ಸ್ಥಾನ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ದೃಢ ನಿರ್ಧಾರ ತೆಗೆದುಕೊಂಡಿದ್ದೇನೆ. ನನ್ನ ನಿರ್ಧಾರವನ್ನು ನನ್ನೆಲ್ಲಾ ಮಿತ್ರರು, ಹಿತೈಷಿಗಳು ಸ್ವಾಗತಿಸಲಿದ್ದಾರೆ ಎಂಬ ನಂಬಿಕೆ ನನ್ನದು ಎಂದು ಹಾರ್ದಿಕ್ ತಿಳಿಸಿದ್ದಾರೆ.
ಗುಜರಾತ್ ವಿಧಾನಸಭಾ ಚುನಾವಣೆಗೂ ಮುನ್ನ ಹಾರ್ದಿಕ್ ಪಟೇಲ್ ರಾಜೀನಾಮೆ ನೀಡಿರುವುದು ಕಾಂಗ್ರೆಸ್ ಪಕ್ಷಕ್ಕೆ ಬಹುದೊಡ್ಡ ಹಿನ್ನಡೆಯಾಗಿದೆ. ಗುಜರಾತ್ ನ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾರ್ದಿಕ್ ಅವರನ್ನು ಮೂಲೆಗುಂಪು ಮಾಡಿರುವ ಹಿನ್ನೆಲೆಯಲ್ಲಿ ಪಕ್ಷದ ಹುದ್ದೆಗಳಿಗೆ ರಾಜೀನಾಮೆ ನೀಡಿರುವುದಾಗಿ ವರದಿ ವಿವರಿಸಿದೆ.
ಚಿಕನ್ ಸ್ಯಾಂಡ್ ವಿಚ್ ಇಷ್ಟ:
ಗುಜರಾತ್ ಕಾಂಗ್ರೆಸ್ ಮುಖಂಡರು ರಾಜ್ಯದ ಪ್ರಮುಖ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸುತ್ತಿಲ್ಲ. ಆದರೆ ದೆಹಲಿಯಿಂದ ಗುಜರಾತ್ ಗೆ ಆಗಮಿಸುವ ಕಾಂಗ್ರೆಸ್ ಮುಖಂಡರುಗಳಿಗೆ ಚಿಕನ್ ಸ್ಯಾಂಡ್ ವಿಚ್ ನೀಡುವುದರಲ್ಲಿಯೇ ಹೆಚ್ಚು ಆಸಕ್ತರಾಗಿದ್ದಾರೆ ಎಂದು ಹಾರ್ದಿಕ್ ಪಟೇಲ್ ಟೀಕಿಸಿದ್ದಾರೆ.