Advertisement
ಇದನ್ನೂ ಓದಿ:ಸೋಲಿನ ಮೇಲೆ ಬರೆ: ನಾಯಕ ರೋಹಿತ್ ಸೇರಿ ಮೂವರು ತಂಡದಿಂದ ಔಟ್
Related Articles
Advertisement
ಬಲ ಕಳೆದುಕೊಂಡ ಕಾಂಗ್ರೆಸ್ ಪಡೆ:
2017ರಲ್ಲಿ ನಡೆದ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 99 ಸ್ಥಾನಗಳಲ್ಲಿ ಜಯಗಳಿಸಿ 6ನೇ ಬಾರಿ ಅಧಿಕಾರದ ಗದ್ದುಗೆ ಏರಿತ್ತು. ಕಾಂಗ್ರೆಸ್ ಪಕ್ಷ 77 ಕ್ಷೇತ್ರಗಳಲ್ಲಿ ಜಯಗಳಿಸುವ ಮೂಲಕ ಪ್ರಬಲ ವಿಪಕ್ಷವಾಗಿ ಹೊರಹೊಮ್ಮಿತ್ತು. ಆದರೆ 2022ರ ವಿಧಾನಸಭಾ ಚುನಾವಣೆಯಲ್ಲಿ ಬಲವೃದ್ಧಿಸಿಕೊಂಡಿರುವ ಆಡಳಿತಾರೂಢ ಬಿಜೆಪಿ 150 ಸ್ಥಾನಗಳಲ್ಲಿ ಭಾರೀ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಕೇವಲ 18 ಸ್ಥಾನಗಳಲ್ಲಷ್ಟೇ ಮುನ್ನಡೇ ಸಾಧಿಸಿ ಭಾರೀ ಮುಖಭಂಗ ಅನುಭವಿಸುವಂತಾಗಿದೆ.
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯ ನಡುವೆಯೇ ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕಳಪೆ ಸಾಧನೆ ಪಕ್ಷವನ್ನು ತೀವ್ರ ಮುಜುಗರಕ್ಕೀಡು ಮಾಡುವಂತಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಬಿಜೆಪಿ ದಾಖಲೆಯ ಆಡಳಿತ:
ಪಶ್ಚಿಮಬಂಗಾಳದಲ್ಲಿ ಸಿಪಿಎಂ ನೇತೃತ್ವದ ಎಡಪಕ್ಷಗಳು ಸತತ ಏಳು ಬಾರಿ ಗೆಲುವು ಸಾಧಿಸುವ ಮೂಲಕ ಅಧಿಕಾರದ ಗದ್ದುಗೆಗೆ ಏರಿ ದಾಖಲೆ ನಿರ್ಮಿಸಿತ್ತು. ಇದೀಗ ಗುಜರಾತ್ ನಲ್ಲಿಯೂ ಭಾರತೀಯ ಜನತಾ ಪಕ್ಷ ಏಳನೇ ಬಾರಿ ಆಡಳಿತ ನಡೆಸುವ ಮೂಲಕ ದಾಖಲೆ ಬರೆದಂತಾಗಲಿದೆ.