Advertisement
ಗುಜರಾತ್ ವಿಧಾನಸಭೆಯ ಎರಡನೇ ಹಂತದ ಚುನಾವಣೆ ಹಿನ್ನೆಲೆಯಲ್ಲಿ ಆನಂದ್ ಜಿಲ್ಲೆಯ ಸೋಜಿತ್ರಾ ಪಟ್ಟಣದಲ್ಲಿ ಶುಕ್ರವಾರ ನಡೆದ ಪ್ರಚಾರ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, “ಭಾರತದ ಏಕತೆ ಕಾಂಗ್ರೆಸ್‌ಗೆ ಬೇಕಿರಲಿಲ್ಲ. ಅದು ಒಡೆದು ಆಳುವ ನೀತಿಯನ್ನು ಅನುಸರಿಸುತ್ತದೆ. ಪಟೇಲರು ಪ್ರತಿಯೊಬ್ಬರನ್ನು ಒಂದುಗೂಡಿಸುವ ಸಿದ್ಧಾಂತಕ್ಕೆ ಬದ್ಧರಾಗಿದ್ದರು. ಈ ಭಿನ್ನಾಭಿಪ್ರಾಯ ಕಾರಣದಿಂದ ಕಾಂಗ್ರೆಸ್ ಎಂದೂ ಪಟೇಲರನ್ನು ತಮ್ಮವರು ಎಂದುಕೊಳ್ಳಲಿಲ್ಲ,’ ಎಂದರು.
Related Articles
“ಶೇ.50ರಷ್ಟು ಉದ್ಯೋಗಗಳು ದಲಿತರು, ಬುಡಕಟ್ಟು ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳ ಪಾಲಿಗೆ ಹೋಗುವ ಹಿನ್ನೆಲೆಯಲ್ಲಿ ಗುಜರಾತ್‌ನ ಬಿಜೆಪಿ ಸರ್ಕಾರ 5 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಲಿಲ್ಲ,’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾಜುನ ಖರ್ಗೆ ಆರೋಪಿಸಿದರು.
Advertisement
ಗುಜರಾತ್‌ನ ಅರಾವಳಿ ಜಿಲ್ಲೆಯ ಎಸ್‌ಟಿ ಮೀಸಲಿನ ಭಿಲೋದಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಚಾರ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, “ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ದಲಿತರು ಮತ್ತು ಆದಿವಾಸಿಗಳ ಮೇಲೆ ನಡೆಯುತ್ತಿರುವ ದೌರ್ಜನ ಪ್ರಕರಣಗಳ ಸಂಖ್ಯೆಯಲ್ಲಿ ಶೇ.17ರಷ್ಟು ಏರಿಕೆಯಾಗಿದೆ,’ ಎಂದು ದೂರಿದರು.
ಶೇ.63.14ರಷ್ಟು ಮತದಾನ: ಮೊದಲ ಹಂತದಲ್ಲಿ 89 ವಿಧಾನಸಭಾ ಕ್ಷೇತ್ರಗಳಿಗೆ ಗುರುವಾರ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಶೇ.63.14ರಷ್ಟು ಮತದಾನವಾಗಿದೆ.
ಗುಜರಾತ್ ಚಿತ್ರಗಳು ಬಿಡುಗಡೆಇಸ್ರೋ ಇತ್ತೀಚೆಗೆ ಉಡಾಯಿಸಿದ ಇಒಎಸ್-06 ಉಪಗ್ರಹವು ಸೆರೆಹಿಡಿದಿರುವ ಗುಜರಾತ್‌ನ ಅದ್ಭುತ ಚಿತ್ರಗಳನ್ನು ಪ್ರಧಾನಿ ಮೋದಿ ಟ್ವಿಟರ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಮಾಡಿರುವ ಸಾಧನೆ ಕರಾವಳಿ ಕ್ಷೇತ್ರದ ಅರ್ಥ ವ್ಯವಸ್ಥೆ ಬೆಳವಣಿಗೆಗೆ ನೆರವಾಗಲಿದೆ ಎಂದಿದ್ದಾರೆ.