Advertisement

Gujarat: ಮಳೆಗೆ 9 ಮಂದಿ ಮೃತ್ಯು… ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ

07:26 PM Jun 30, 2023 | Team Udayavani |

ಗುಜರಾತ್ : ಗುಜರಾತ್ ನಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು ರಾಜ್ಯದ ಸುತ್ತಮುತ್ತಲ ಪ್ರದೇಶದಲ್ಲಿ ಮಳೆಯ ಅನಾಹುತಕ್ಕೆ ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ.

Advertisement

ಭಾರೀ ಮಳೆಗೆ ರಾಜ್ಯದಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದ್ದು ತಗ್ಗು ಪ್ರದೇಶಗಳು ಜಲಾವೃತವಾಗಿವೆ ಅಲ್ಲದೆ ವಾಹನ ಸಂಚರಿಸುವ ಮುಖ್ಯ ರಸ್ತೆಯು ಜಲಾವೃತವಾಗಿದ್ದು ಸಂಚಾರ ಅಸ್ತವ್ಯಸ್ಥಗೊಂಡಿದೆ.

ಹವಾಮಾನ ಇಲಾಖೆಯ ವರದಿಯಂತೆ ಮುಂದಿನ ನಲವತ್ತೆಂಟು ಗಂಟೆಗಳಲ್ಲಿ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಸೂಚನೆ ನೀಡಿದೆ.

ಜುನಾಗಢ್, ಜಾಮ್‌ನಗರ, ಮೊರ್ಬಿ, ಕಚ್, ಸೂರತ್ ಮತ್ತು ತಾಪಿ ಜಿಲ್ಲೆಗಳಲ್ಲಿ ಹಗಲು ಹೊತ್ತು ಸುರಿದ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಮೂವತ್ತು ಗಂಟೆಗಳಲ್ಲಿ ರಾಜ್ಯದ 30 ಜಿಲ್ಲೆಗಳಲ್ಲಿ ಶುಕ್ರವಾರ ಮಧ್ಯಾಹ್ನದ ವರೆಗೆ 100 ಮಿ.ಮೀ ಮಳೆಯಾಗಿರುವ ವರದಿಯಾಗಿದೆ.

Advertisement

ತಾಪಿ ಜಿಲ್ಲೆಯ ವ್ಯಾರಾ ತಾಲೂಕಿನಲ್ಲಿ ಶುಕ್ರವಾರ ಮಧ್ಯಾಹ್ನ 12 ಗಂಟೆವರೆಗೆ 299 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಶುಕ್ರವಾರ ನೀಡಿದ ಮುನ್ಸೂಚನೆಯಲ್ಲಿ, ಗಾಂಧಿನಗರ, ಖೇಡಾ, ಅಹಮದಾಬಾದ್, ಆನಂದ್, ವಡೋದರಾ, ಭರೂಚ್, ಸೂರತ್, ನವಸಾರಿ ಮತ್ತು ವಲ್ಸಾದ್ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಶನಿವಾರ ಭಾರೀ ಮಳೆಯಾಗಲಿದ್ದು, ಭಾನುವಾರ ರಾಜ್ಯದ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಕಳೆದ ಎರಡು ದಿನಗಳಲ್ಲಿ ಸುರಿದ ಮಳೆಯಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು ಒಂಬತ್ತು ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ: 147 Years Histroy:ಬಾಂಬೆ ಸ್ಟಾಕ್‌ ಎಕ್ಸ್‌ ಚೇಂಜ್‌ ಮೊದಲು ಆರಂಭವಾಗಿದ್ದು ಆಲದ ಮರದ ಕೆಳಗೆ!

Advertisement

Udayavani is now on Telegram. Click here to join our channel and stay updated with the latest news.

Next