Advertisement

ಗುಜರಾತ್ ಸೇತುವೆ ಕುಸಿತ ಘಟನೆ: ಸಂತ್ರಸ್ತರ ಕುಟುಂಬಗಳಿಗೆ ರಷ್ಯಾ ಅಧ್ಯಕ್ಷ ಪುಟಿನ್ ಸಂತಾಪ

06:05 PM Oct 31, 2022 | Team Udayavani |

ಮಾಸ್ಕೊ: ಗುಜರಾತ್‌ನ ಮೊರ್ಬಿ ನಗರದಲ್ಲಿ ಸೇತುವೆ ಕುಸಿದು ಸಾವನ್ನಪ್ಪಿದ ಜನರ ಕುಟುಂಬಗಳಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸಂತಾಪ ಸೂಚಿಸಿದ್ದಾರೆ.

Advertisement

ಶತಮಾನಕ್ಕೂ ಹೆಚ್ಚು ಹಳೆಯದಾದ ಸೇತುವೆಯನ್ನು ಐದು ದಿನಗಳ ಹಿಂದೆ ವ್ಯಾಪಕ ದುರಸ್ತಿ ಮತ್ತು ನವೀಕರಣದ ನಂತರ ಮತ್ತೆ ಸಾರ್ವಜನಿಕರ ಉಪಯೋಗಕ್ಕೆ ತೆರೆಯಲ್ಪಟ್ಟಿತ್ತು. ಭಾನುವಾರ ಸಂಜೆ ಅದು ಕುಸಿದಾಗ ಜನರಿಂದ ಕಿಕ್ಕಿರಿದು ತುಂಬಿತ್ತು ಹಾಗಾಗಿ ಅವಘಡದಲ್ಲಿ ಇಲ್ಲಿಯವರೆಗೆ 134 ಕ್ಕೂ ಹೆಚ್ಚು ಜನರು ನಿಧನರಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಸೋಮವಾರ ಕ್ರೆಮ್ಲಿನ್ ವೆಬ್‌ಸೈಟ್‌ನಲ್ಲಿ ಪ್ರಕಟವಾದ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಪುಟಿನ್ ಸಂದೇಶ ಕಳುಹಿಸಿದ್ದು, “ಆತ್ಮೀಯ ಶ್ರೀಮತಿ, ಪ್ರಿಯ ಪ್ರಧಾನಮಂತ್ರಿ, ಗುಜರಾತ್ ರಾಜ್ಯದಲ್ಲಿನ ದುರಂತ ಸೇತುವೆಯ ಕುಸಿತದ ಬಗ್ಗೆ ನನ್ನ ಹೃದಯಪೂರ್ವಕ ಸಂತಾಪವನ್ನು ದಯವಿಟ್ಟು ಸ್ವೀಕರಿಸಿ..” ಈ ಮೂಲಕ ಪುಟಿನ್ ಅವರು ಸಂತ್ರಸ್ತರ ಕುಟುಂಬಗಳು ಮತ್ತು ಸ್ನೇಹಿತರಿಗೆ ತಮ್ಮ ಸಹಾನುಭೂತಿ ಮತ್ತು ಬೆಂಬಲದ ಮಾತುಗಳನ್ನು ತಿಳಿಸಿದರು ಮತ್ತು ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಹಾರೈಸಿದರು ಎಂದು ಸರ್ಕಾರಿ ಸ್ವಾಮ್ಯದ TASS ಸುದ್ದಿ ಸಂಸ್ಥೆ ವರದಿ ಮಾಡಿದೆ.

ಪ್ರಧಾನಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಮೃತರ ಮುಂದಿನ ಸಂಬಂಧಿಕರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರವನ್ನು ಮೋದಿ ಘೋಷಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next