ಗುಜರಾತ್: ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಗೆಳೆಯರೊಂದಿಗೆ ಕ್ರಿಕೆಟ್ ಆಡುತ್ತಿದ್ದ 45 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕೊನೆಯುಸಿರೆಳೆದ ಘಟನೆ ಭಾನುವಾರ ನಡೆದಿದೆ.
ಮೃತ ವ್ಯಕ್ತಿಯನ್ನು ಗುಜರಾತ್‌ನ ರಾಜ್‌ಕೋಟ್ ನಿವಾಸಿಯಾಗಿರುವ ಮಯೂರ್ (45 ವರ್ಷ) ಎನ್ನಲಾಗಿದ್ದು.
ಇಂದು ಗುಜರಾತ್‌ನ ರಾಜ್‌ಕೋಟ್‌ನಲ್ಲಿರುವ ಶಾಸ್ತ್ರಿ ಮೈದಾನದಲ್ಲಿ ತನ್ನ ಸ್ನೇಹಿತರೊಂದಿಗೆ ಆಟವಾಡುತ್ತಿದ್ದ ವೇಳೆ ಮಯೂರ್ ಇದ್ದಕ್ಕಿದ್ದಂತೆ ನೆಲಕ್ಕೆ ಕುಸಿದು ಬಿದ್ದಿದ್ದಾರೆ ಘಟನೆ ನಡೆದ ಕೂಡಲೇ ಸ್ನೇಹಿತರು ಹತ್ತಿರದ ಆಸ್ಪತ್ರೆಗೆ ಕೊಂಡೊಯ್ದರು ಫಲಕಾರಿಯಾಗಲಿಲ್ಲ ಎನ್ನಲಾಗಿದೆ.
ಕುಟುಂಬದ ಆಧಾರವಾಗಿದ್ದ ಮಯೂರ್
ಮಯೂರ್ ಕುಟುಂಬದ ಆಧಾರವಾಗಿದ್ದರು ಎನ್ನಲಾಗಿದೆ, ಅಕ್ಕಸಾಲಿಗರಾಗಿ ಕೆಲಸ ಮಾಡುತ್ತಿದ್ದ ಇವರು ಕುಟುಂಬ ನಿರ್ವಹಣೆ ಇವರಿಂದಲೇ ನಡೆಯುತ್ತಿತ್ತು ಎನ್ನಲಾಗಿದ್ದು ಮಯೂರ್ ಅಕಾಲಿಕ ನಿಧನದಿಂದ ಕುಟುಂಬ ಕಂಗಾಲಾಗಿದೆ.
Related Articles
ಇದರೊಂದಿಗೆ ಕಳೆದ ನಲವತ್ತೈದು ದಿನಗಳಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವವರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ: ದೆಹಲಿಯ ಮೆಟ್ರೋ ನಿರ್ಮಾಣ ಪ್ರದೇಶದ ಬಳಿ ಚೀಲದಲ್ಲಿ ಮಹಿಳೆಯ ಕೊಳೆತ ದೇಹದ ಭಾಗಗಳು ಪತ್ತೆ