Advertisement
ಗುಜರಾತ್ ರಾಜ್ಯಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯಿಂದ ಎದುರಾದ “ಅಪಾಯ’ವನ್ನು ತಪ್ಪಿಸಲು ಗುಜರಾತ್ ಶಾಸಕರಿಗೆ ರಕ್ಷಣೆ ನೀಡುವಂತೆ ಕಾಂಗ್ರೆಸ್ ಹಲವು ಪ್ರಮುಖ ನಾಯಕರ ಮೊರೆ ಹೋಗಿತ್ತು ಎನ್ನಲಾಗಿದೆ.
ಟ್ರಬಲ್ ಶೂಟರ್ ಆಗಿ ಕಾಣಿಸಿಕೊಳ್ಳುತ್ತಿರುವ ಡಿಕೆಶಿ ಹಲವು ಸಂದರ್ಭಗಳಲ್ಲಿ ಪಕ್ಷದ “ಮಾನ’ ಕಾಪಾಡಿದ್ದಾರೆ. ಹಿಂದೆ ಮಹಾರಾಷ್ಟ್ರದಲ್ಲಿ ವಿಲಾಸ್‌ರಾವ ದೇಶಮುಖ್ ಬಹುಮತ ಸಾಬೀತುಪಡಿಸಲು ತಮ್ಮ ಶಾಸಕರನ್ನು ರಕ್ಷಿಸಿಕೊಳ್ಳಲು
ಅವರನ್ನು ಕರ್ನಾಟಕಕ್ಕೆ ಕಳುಹಿಸಿಕೊಟ್ಟಿದ್ದರು. ಆಗ ಶಿವಕುಮಾರ್ ಅವರೇ ಆ ಶಾಸಕರ ಜವಾಬ್ದಾರಿ ವಹಿಸಿಕೊಂಡಿದ್ದರು. ಆಗ ವಿಲಾಸ್ ರಾವ್ ದೇಶಮುಖ್ ಸದನದಲ್ಲಿ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದ್ದರು. ಇದಲ್ಲದೇ ಕನಕಪುರ ಲೋಕಸಭೆಯ ಉಪ ಚುನಾವಣೆಯಲ್ಲಿ ದೇವೇಗೌಡರ ವಿರುದಟಛಿ ಸ್ಪರ್ಧೆಗೆ ಕಾಂಗ್ರೆಸ್‌ನಲ್ಲಿ ಯಾರೂ ಮುಂದೆ ಬರದಿದ್ದಾಗ ಹೈ ಕಮಾಂಡ್ ಕಣ್ಣಿಗೆ ಬಿದ್ದಿದ್ದು ಇದೇ ಶಿವಕುಮಾರ್.
Related Articles
Advertisement
ಇತ್ತೀಚೆಗೆ ನಡೆದ ನಂಜನಗೂಡು, ಗುಂಡ್ಲುಪೇಟೆ ಉಪ ಚುನಾವಣೆಯಲ್ಲೂ ನಿರ್ಣಾಯಕ ಪಾತ್ರವಹಿಸಿದ್ದರು. ಐಟಿ ದಾಳಿ ನಡುವೆಯೂ ಹೈ ಕಮಾಂಡ್ ಆದೇಶವನ್ನು ಪಾಲಿಸಿ, ಪಕ್ಷ ನಿಷ್ಠೆ ಮೆರೆದಿರುವುದಕ್ಕೆ ರಾಷ್ಟ್ರಮಟ್ಟದಲ್ಲಿ ಪಕ್ಷದ ವೇದಿಕೆಯಲ್ಲಿ ಅವರಿಗೆ ಸೂಕ್ತ ಗೌರವ ದೊರೆಯುತ್ತದೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿವೆ. ಡಿ.ಕೆ. ಶಿವಕುಮಾರ್‌ಗೆ ಹೆಚ್ಚಿನ ಜವಾಬ್ದಾರಿ ನೀಡುವ ಕುರಿತಂತೆ ಸಧ್ಯ ಸಾಕಷ್ಟು ಊಹಾ ಪೋಹದ ಚರ್ಚೆಗಳು ನಡೆಯುತ್ತಿದ್ದು, ಅವರಿಗೆ ಖಾಲಿ ಇರುವ ಗೃಹ ಖಾತೆ ನೀಡುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ವರ್ಷಾಂತ್ಯದಲ್ಲಿ ಗುಜರಾತನಲ್ಲಿ ನಡೆಯುವ ವಿಧಾನಸಭೆ ಚುನಾವಣೆಗೆ ಉಸ್ತುವಾರಿಯಾಗಿ ನೇಮಿಸುತ್ತಾರೆ ಎಂಬ ಮಾತುಗಳೂ ಕೇಳಿ ಬರುತ್ತಿವೆ.
ಗುಜರಾತ್ ಚುನಾವಣೆಯಲ್ಲಿ ಅಹಮದ್ ಪಟೇಲ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿರುವ ಇಂಧನ ಸಚಿವ ಡಿ.ಕೆ.ಶಿವಕುಮಾರ್‌ಗೆ ಗುಜರಾತ್ ಉಸ್ತುವಾರಿ ವಹಿಸಿದರೆ, ಸಮರ್ಥವಾಗಿ ನಿಭಾಯಿಸುತ್ತಾರೆ
– ಸತೀಶ್ ಜಾರಕಿಹೊಳಿ, ಎಐಸಿಸಿ ಕಾರ್ಯದರ್ಶಿ – ಶಂಕರ್ ಪಾಗೋಜಿ