ನವದೆಹಲಿ: 2002ರಲ್ಲಿ ಗೋದ್ರಾದಲ್ಲಿ ಸಬರಮತಿ ರೈಲಿಗೆ ಬೆಂಕಿ ಹಚ್ಚಿದ್ದ ಪ್ರಕರಣದ ಕೆಲವು ಅಪರಾಧಿಗಳು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಜಾಮೀನು ಅರ್ಜಿಗೆ ಗುಜರಾತ್ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ.
ಅಪರಾಧಿಗಳು ಕೇವಲ ಕಲ್ಲು ತೂರಾಟಗಾರರಾಗಿರಲಿಲ್ಲ. ಹೊತ್ತಿ ಉರಿಯುತ್ತಿದ್ದ ರೈಲಿನ ಬೋಗಿಯಿಂದ ಪ್ರಯಾಣಿಕರು ತಪ್ಪಿಸಿಕೊಳ್ಳದಂತೆ ತಡೆಯುವುದು ಅವರ ಉದ್ದೇಶವಾಗಿತ್ತು ಎಂದು ಗುಜರಾತ್ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು.
ಇದಕ್ಕೂ ಮುನ್ನ ಈ ಕುರಿತ ವಿಚಾರಣೆ ನಡೆಸಿದ ನ್ಯಾಯಪೀಠ, ಅಪರಾಧಿಗಳು ಈಗಾಲೇ 17ರಿಂದ 18 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದಾರೆ. ಹೀಗಾಗಿ ಅವರ ಜಾಮೀನು ಅರ್ಜಿ ಪರಿಗಣಿಸಬಹುದು ಎಂದು ಹೇಳಿತು.
ಇದೇ ವೇಳೆ ಪ್ರಕರಣದಲ್ಲಿ ಪ್ರತಿಯೊಬ್ಬ ಅಪರಾಧಿಯ ಪಾತ್ರವೇನು ಎಂಬುದನ್ನು ಸ್ಪಷ್ಟಪಡಿಸಿ ಎಂದೂ ಗುಜರಾತ್ ಸರ್ಕಾರಕ್ಕೆ ಸೂಚಿಸಿ, ವಿಚಾರಣೆಯನ್ನು ಡಿ.15ಕ್ಕೆ ಮುಂದೂಡಿತು.
2022ರ ಫೆ.27ರಂದು ದುಷ್ಕರ್ಮಿಗಳು ಸಬರಮತಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ ಹಾಕಿ, 59 ಮಂದಿಯನ್ನು ಜೀವಂತವಾಗಿ ಸುಟ್ಟಿದ್ದರು.