ಮುಂಬೈ: ಪಂಜಾಬ್ ಕಿಂಗ್ಸ್ ವಿರುದ್ಧ ಶುಕ್ರವಾರ ರಾತ್ರಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ರೋಚಕ ಜಯ ಸಾಧಿಸಿದೆ. ಕೊನೆಯ ಎರಡು ಎಸೆತದಲ್ಲಿ ಎರಡು ಸಿಕ್ಸರ್ ಬಾರಿಸಿ ರಾಹುಲ್ ತಿವಾಟಿಯಾ ಗುಜರಾತ್ ತಂಡಕ್ಕೆ ಮತ್ತೊಂದು ಗೆಲುವು ತಂದಿತ್ತರು.
ಸತತ ಮೂರು ಗೆಲುವಿನೊಂದಿಗೆ ಗುಜರಾತ್ ಟೈಟಾನ್ಸ್ ತಂಡ ದಾಖಲೆ ಪಟ್ಟಿಗೆ ಸೇರಿದೆ. ಹಾರ್ದಿಕ್ ಪಾಂಡ್ಯ ತಂಡವು ಇಂಡಿಯನ್ ಪ್ರೀಮಿಯರ್ ಲೀಗ್ ನ ಇತಿಹಾಸದಲ್ಲಿ ತಮ್ಮ ಚೊಚ್ಚಲ ಋತುವಿನಲ್ಲಿ ಮೊದಲ ಮೂರು ಪಂದ್ಯಗಳನ್ನು ಗೆದ್ದ ಮೂರನೇ ತಂಡವಾಯಿತು.
2008ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮತ್ತು 2016ರಲ್ಲಿ ಸುರೇಶ್ ರೈನಾ ನಾಯಕತ್ವದ ಗುಜರಾತ್ ಲಯನ್ಸ್ ತಂಡ ಮೊದಲ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿತ್ತು.
ಇದನ್ನೂ ಓದಿ:ಬಾಲಿವುಡ್ ಕ್ಯೂಟ್ ಜೋಡಿ ರಣಬೀರ್ ಕಪೂರ್- ಆಲಿಯಾ ಭಟ್ ಮದುವೆ ದಿನಾಂಕ ಫಿಕ್ಸ್
ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ ತನ್ನ ಮೊದಲ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ, ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದುಕೊಂಡಿತ್ತು.
ಬ್ರೆಬೋರ್ನ್ ಮೈದಾದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಪಂಜಾಬ್ ಕಿಂಗ್ಸ್ ಲಿಯಾಮ್ ಲಿವಿಂಗ್ ಸ್ಟೋನ್ ಅರ್ಧಶತಕದ ನೆರವಿನಿಂದ 189 ರನ್ ಗಳಿಸಿದರೆ, ಗುಜರಾತ್ ಟೈಟಾನ್ಸ್ ತಂಡವು 190 ರನ್ ಗಳಿಸಿ ಜಯ ಸಾಧಿಸಿತು. 96 ರನ್ ಗಳಿಸಿದ ಶುಭ್ಮನ್ ಗಿಲ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.