ಗುಜರಾತ್: ಇಲ್ಲಿನ ರಾಸಾಯನಿಕ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 25ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.
Advertisement
ಗುಜರಾತ್ ನ ಅಹ್ಮದಾಬಾದ್ ನಲ್ಲಿರುವ ವತ್ವಾ ಪ್ರದೇಶದಲ್ಲಿ ಬುಧವಾರ (ಡಿ.9) ಬೆಳಗಿನ ಜಾವ ದುರಂತ ನಡೆದಿದ್ದು, ರಾಸಾಯನಿಕ ಕಾರ್ಖಾನೆಯಲ್ಲಿ ಸ್ಪೋಟ ಸಂಭವಿಸಿದೆ ಎನ್ನಲಾಗಿದೆ. ದುರ್ಘಟನೆಯಲ್ಲಿ ಯಾವುದೇ ಸೋವುನೋವಿನ ಬಗ್ಗೆ ವರದಿಯಾಗಿಲ್ಲ. ಅವಘಡಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ ಎಂದು ಗುಜರಾತ್ ಪೊಲೀಸರು ಮಾಹಿತಿ ನೀಡಿದ್ದಾರೆ.
ಕಳೆದ ಭಾನುವಾರ ಇಲ್ಲಿನ ಬಗಾಪುರದಲ್ಲಿ ಬೆಂಕಿ ದುರಂತ ಸಂಭವಿಸಿ 20ಕ್ಕೂ ಹೆಚ್ಚು ಅಂಗಡಿಗಳು ನಾಶವಾಗಿದ್ದವು.