ಗಾಂಧಿನಗರ: ಗುಜರಾತ್ ಕಾಂಗ್ರೆಸ್ ನಾಯಕ ಮತ್ತು ವಡ್ಗಾಮ್ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ. ಬುಧವಾರ ರಾತ್ರಿ 11:30ರ ಸುಮಾರಿಗೆ ಪಾಲನ್‌ಪುರ ಸರ್ಕ್ಯೂಟ್ ಹೌಸ್‌ನಿಂದ ಪೊಲೀಸರು ಅವರನ್ನು ಬಂಧಿಸಿದ್ದಾರೆ.
ಜಿಗ್ನೇಶ್ ಮೇವಾನಿ ಬಂಧನದ ಸುದ್ದಿಯನ್ನು ಅವರ ಬೆಂಬಲಿಗರು ಖಚಿತಪಡಿಸಿದ್ದಾರೆ. ಕಾಂಗ್ರೆಸ್ ನಾಯಕನನ್ನು ಬಂಧಿಸುವಾಗ ಪೊಲೀಸರ ಬಳಿ ಎಫ್‌ಐಆರ್ ಪ್ರತಿ ಇರಲಿಲ್ಲ ಎಂದು ಅವರು ಹೇಳಿದ್ದಾರೆ.
ಅಸ್ಸಾಂ ಪೊಲೀಸರು ಜಿಗ್ನೇಶ್ ಮೇವಾನಿ ವಿರುದ್ಧ ಜಾಮೀನು ರಹಿತ ಸೆಕ್ಷನ್‌ಗಳನ್ನು ದಾಖಲಿಸಿದ್ದಾರೆ. ಕೆಲವು ದಿನಗಳ ಹಿಂದೆ ಹಂಚಿಕೊಂಡ ಟ್ವೀಟ್ ನ ಆಧಾರದ ಮೇಲೆ ಎರಡು ಸಮುದಾಯಗಳ ನಡುವೆ ದ್ವೇಷವನ್ನು ಸೃಷ್ಟಿಸಲು ಸಂಚು, ಸಮುದಾಯವನ್ನು ಅವಮಾನಿಸುವುದು, ಶಾಂತಿಯ ವಾತಾವರಣವನ್ನು ಕದಡುವ ಪ್ರಕರಣಗಳನ್ನು ದಾಖಲಿಸಿದ್ದಾರೆ.
ಜಿಗ್ನೇಶ್ ಮೇವಾನಿ ಅವರನ್ನು ಅಹಮದಾಬಾದ್ ಗೆ ಕರೆದೊಯ್ಯಲಾಗಿದ್ದು, ಅಲ್ಲಿಂದ ಅಸ್ಸಾಂ ಪೊಲೀಸರು ಅವರನ್ನು ರೈಲಿನಲ್ಲಿ ಗುವಾಹಟಿಗೆ ಕರೆದೊಯ್ಯಲಿದ್ದಾರೆ.
ಇದನ್ನೂ ಓದಿ:ಗೆಲುವಿನ ಅಂತರ ಒಂದೇ ರನ್! ಜಲಕ್ ಇದ್ದರಷ್ಟೇ ಕಪ್ ಎಂಬುದನ್ನು ಸಾಬೀತುಪಡಿಸಿದ ಮುಂಬೈ
ಜಿಗ್ನೇಶ್ ಮೇವಾನಿ ಬಂಧನದ ವಿರುದ್ಧ ಕಾಂಗ್ರೆಸ್ ನಾಯಕರ ಬೆಂಬಲಿಗರು ಇಂದು ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ‘ಸಂವಿಧಾನ ಉಳಿಸಿ, ದೇಶ ಉಳಿಸಿ’ ಎಂಬ ಘೋಷಣೆಗಳೊಂದಿಗೆ ಪ್ರತಿಭಟನೆ ನಡೆಸಲಿದ್ದಾರೆ.