ಗಾಂಧಿನಗರ: ವಿಧಾನಸಭೆ ಚುನಾವಣೆಗೆ ತಯಾರಿ ನಡೆಸುತ್ತಿರುವ ಗುಜರಾತ್ ಬಿಜೆಪಿಯು ಚುನಾವಣೆಗೆ ಮೊದಲೊಂದು ಮಾಸ್ಟರ್ ಸ್ಟ್ರೋಕ್ ನೀಡಲು ಯೋಜನೆ ರೂಪಿಸಿದೆ. ಭಾರೀ ಚರ್ಚೆಗೆ ಕಾರಣವಾಗಿರುವ ಏಕರೂಪ ನಾಗರಿಕ ಸಂಹಿತೆ (Uniform Civil Code) ಜಾರಿಗೆ ತರಲು ಗುಜರಾತ್ ಸರ್ಕಾರ ಮುಂದಾಗಿದೆ.
ಶನಿವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಮಿತಿ ರಚನೆಯ ಪ್ರಸ್ತಾವನೆಗೆ ಅನುಮೋದನೆ ನೀಡಿದೆ ಎಂದು ಗುಜರಾತ್ ಗೃಹ ಸಚಿವ ಹರ್ಷ್ ಸಂಘ್ವಿ ಹೇಳಿದ್ದಾರೆ.
ಮುಂದಿನ ವಾರ ಗುಜರಾತ್ ಚುನಾವಣೆಗೆ ವೇಳಾಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಹೀಗಾಗಿ ಇಂದು ನಡೆದ ಕ್ಯಾಬಿನೆಟ್ ಮೀಟಿಂಗ್ ಭೂಪೇಂದ್ರ ಪಟೇಲ್ ನೇತೃತ್ವದ ಬಿಜೆಪಿ ಸರ್ಕಾರದ ಕೊನೆಯ ಮೀಟಿಂಗ್ ಎನ್ನಲಾಗಿದೆ. ಸಮಿತಿಯು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿರುತ್ತದೆ ಮತ್ತು ಮೂರರಿಂದ ನಾಲ್ಕು ಸದಸ್ಯರನ್ನು ಹೊಂದಿರುತ್ತದೆ”ಎಂದು ಕೇಂದ್ರ ಸಚಿವ ಪರಶೋತ್ತಮ್ ರೂಪಾಲಾ ಹೇಳಿದರು.
ಇದನ್ನೂ ಓದಿ:ಗ್ಲೆನ್ ಫಿಲಿಪ್ಸ್ ಭರ್ಜರಿ ಶತಕ; ಕಿವೀಸ್ ದಾಳಿಗೆ ಕಂಗಾಲಾದ ಶ್ರೀಲಂಕಾ
ಏಕರೂಪ ನಾಗರಿಕ ಸಂಹಿತೆಯು ಭಾರತದಲ್ಲಿನ ನಾಗರಿಕರ ವೈಯಕ್ತಿಕ ಕಾನೂನುಗಳನ್ನು ರೂಪಿಸಲು ಮತ್ತು ಕಾರ್ಯಗತಗೊಳಿಸಲು ಒಂದು ಪ್ರಸ್ತಾಪವಾಗಿದೆ. ಇದು ನಾಗರಿಕರ ಧರ್ಮ, ಲಿಂಗ ಮತ್ತು ಲೈಂಗಿಕ ದೃಷ್ಟಿಕೋನವನ್ನು ಲೆಕ್ಕಿಸದೆ ಎಲ್ಲ ನಾಗರಿಕರಿಗೆ ಸಮಾನವಾಗಿ ಅನ್ವಯಿಸುತ್ತದೆ.
ಈ ಹಿಂದೆ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದ ಬಿಜೆಪಿ ಸರ್ಕಾರಗಳು ತಮ್ಮ ರಾಜ್ಯಗಳಲ್ಲಿ ಯುಸಿಸಿಯನ್ನು ಜಾರಿಗೆ ತರುವುದಾಗಿ ಘೋಷಿಸಿದ್ದವು.