Advertisement

ಗುಜರಾತ್‌ ಫ‌ಲಿತಾಂಶ ರಾಜ್ಯದ ಮೇಲೆ ಪರಿಣಾಮ ಬೀರಲ್ಲ

06:05 AM Dec 17, 2017 | Team Udayavani |

ಬೆಂಗಳೂರು: ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷ ಜಯಶಾಲಿಯಾದರೂ, ಇದರಿಂದ ಕರ್ನಾಟಕದ ರಾಜಕೀಯದಲ್ಲಿ ಯಾವ ಬದಲಾವಣೆ ತರಲು ಸಾಧ್ಯವಿಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಅಭಿಪ್ರಾಯ ವ್ಯಕ್ತಪಡಿಸಿದರು.

Advertisement

ವಿಜಯ ದಿವಸ್‌ ಅಂಗವಾಗಿ ಹುತಾತ್ಮ ಯೋಧರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್‌ ಚುನಾ ವಣೆಗೂ ರಾಜ್ಯ ರಾಜಕೀಯಕ್ಕೂ ಸಂಬಂಧವೇ ಇಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ, ಕೆಲಸದ ಮೂಲಕ ಜನರ ವಿಶ್ವಾಸ ಉಳಿಸಿ ಕೊಂಡಿದೆ. ಬಿಜೆಪಿಯವರು ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಂಡಿಲ್ಲ ಎಂದು ದೂರಿದರು.

ರಾಹುಲ್‌ ಜತೆ ಕಾಂಗ್ರೆಸ್‌ ಇದೆ : ಎಐಸಿಸಿ ಉಪಾಧ್ಯಕ್ಷರಾಗಿದ್ದ ರಾಹುಲ್‌ ಗಾಂಧಿಯವರು 2-3 ವರ್ಷಗಳ ಹಿಂದೆಯೇ ಅಧ್ಯಕ್ಷರಾ ಗುತ್ತಾರೆಂಬ ಸುದ್ದಿ ಇತ್ತು. ಈಗ ಪಕ್ಷದ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದು, ಅಧಿಕಾರ ಸ್ವೀಕರಿಸಿಕೊಂಡಿದ್ದಾರೆ.

ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಮಾರ್ಗದರ್ಶನ ಇದ್ದೇ ಇರುತ್ತದೆ. ಸೋನಿಯಾ ಗಾಂಧಿ ಪಕ್ಷದ
ಅಧ್ಯಕ್ಷರಾದ ಸಂದರ್ಭದಲ್ಲಿ 3 ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿತ್ತು, ಅದನ್ನು 14 ರಾಜ್ಯಕ್ಕೆ ವಿಸ್ತರಿಸಿ, ಎರಡು ಬಾರಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವಂತೆ ಮಾಡಿದ್ದಾರೆ. ರಾಹುಲ್ ಗಾಂಧಿ ಕಳೆದ ಹತ್ತು ವರ್ಷದಿಂದ ಸಕ್ರಿಯ ರಾಜಕಾರಣದಲ್ಲಿದ್ದಾರೆ. ಉಪಾಧ್ಯಕ್ಷರಾಗಿ ಕೆಲಸ ಮಾಡಿದ ಅನುಭವ ಇದೆ. ಹೀಗಾಗಿ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದರು.

ಬಿಗಿ ಬಂದೋಬಸ್ತ್
ಕಳೆದ ಬಾರಿ ಹೊಸವರ್ಷ ಆಚರಣೆ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆ ದೇಶದಲ್ಲಿ ಭಾರೀ ಸುದ್ದಿ ಮಾಡಿತ್ತು. ಮಹಿಳೆಯರಿಗೆ ರಕ್ಷಣೆಯಿಲ್ಲ ಎಂಬ ಕೂಗು ಕೇಳಿ ಬಂದಿತ್ತು. ಈ ವರ್ಷ ಎಲ್ಲಾ ನ್ಯೂನತೆಗಳನ್ನು ಸರಿಪಡಿಸಿ, ಯಾರಿಗೂ ತೊಂದರೆಯಾದಂತೆ ರಕ್ಷಣೆ ಒದಗಿಸಲಾಗುತ್ತದೆ. ಜನ ಸೇರುವ ಕಡೆಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗುತ್ತದೆ. ಎಲ್ಲದಕ್ಕೂ ಪೊಲೀಸ್‌ ಇಲಾಖೆಯನ್ನೇ ದೂರುವುದಕ್ಕಿಂತ ಹೊಸ ವರ್ಷದ ಆಚರಣೆಗೆ ಬರುವವರು ಕೂಡ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ನ್ಯೂ ಇಯರ್‌ ಪಾರ್ಟಿ ನಂತರ ಡ್ರಿಂಕ್‌ ಆ್ಯಂಡ್‌ ಡ್ರೈವ್‌, ಹಿಟ್‌ ಆನ್‌ ರನ್‌ ಇತ್ಯಾದಿ ಮಾಡಬಾರದು. ಸಂಭ್ರಮಾಚಾರಣೆಗೆ ಬರುವವರು ಸಂಯಮದಿಂದ ವರ್ತಿಸಬೇಕು ಎಂದು ರಾಮಲಿಂಗಾರೆಡ್ಡಿ ಮನವಿ ಮಾಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next