Advertisement

ಮನವೊಲಿಕೆಗೆ ಗುಲಾಂ ನಬಿ ಆಜಾದ್‌ ಆಗಮನ

11:41 PM Jul 09, 2019 | Team Udayavani |

ಬೆಂಗಳೂರು: 13 ಶಾಸಕರು ಏಕಕಾಲಕ್ಕೆ ರಾಜೀನಾಮೆ ಸಲ್ಲಿಸಿರುವುದರಿಂದ ಅಲ್ಪಮತಕ್ಕೆ ಕುಸಿದಿರುವ ಮೈತ್ರಿ ಸರ್ಕಾರ ಉಳಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಂ ನಬಿ ಆಜಾದ್‌ ಬೆಂಗಳೂರಿಗೆ ಆಗಮಿಸಿದ್ದಾರೆ.

Advertisement

ಪಕ್ಷದ ಹಿರಿಯ ಶಾಸಕರಾದ ರಾಮಲಿಂಗಾ ರೆಡ್ಡಿ ಹಾಗೂ ರೋಷನ್‌ ಬೇಗ್‌ ಕೂಡ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದರಿಂದ ಸರ್ಕಾರ ಉಳಿಸಿಕೊಳ್ಳುವುದು ಕಷ್ಟ ಎಂಬ ವಾತಾವರಣ ಕಾಂಗ್ರೆಸ್‌ ವಲಯದಲ್ಲಿ ಕೇಳಿ ಬರುತ್ತಿದೆ. ಹೀಗಾಗಿ ಸಾಧ್ಯವಾದಷ್ಟು ಅತೃಪ್ತರನ್ನು ಉಳಿಸಿಕೊಳ್ಳಲು ಗಂಭೀರ ಪ್ರಯತ್ನ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಅದೇ ಕಾರಣಕ್ಕೆ ರಾಜ್ಯಕ್ಕೆ ಆಗಮಿಸಿರುವ ಗುಲಾಂ ನಬಿ ಆಜಾದ್‌, ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಎಚ್‌.ಕೆ. ಪಾಟೀಲ್‌, ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಸಚಿವರಾದ ಕೆ.ಜೆ. ಜಾರ್ಜ್‌, ಜಮೀರ್‌ ಅಹಮದ್‌ ಜತೆ ಸಭೆ ನಡೆಸಿದರು.

ಪ್ರಮುಖವಾಗಿ ರಾಮಲಿಂಗಾ ರೆಡ್ಡಿ ಹಾಗೂ ರೋಷನ್‌ ಬೇಗ್‌ ಅವರ ರಾಜೀನಾಮೆಯನ್ನು ವಾಪಸ್‌ ಪಡೆಯುವಂತೆ ಮನವೊಲಿಸಿ, ಸರ್ಕಾರವನ್ನು ಉಳಿಸಿಕೊಳ್ಳಲು ಪ್ರಯತ್ನ ನಡೆಸಿದ್ದಾರೆಂದು ತಿಳಿದು ಬಂದಿದೆ. ಬುಧವಾರ ರಾಮಲಿಂಗಾ ರೆಡ್ಡಿ ಹಾಗೂ ರೋಷನ್‌ ಬೇಗ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next