Advertisement
ಬುಧವಾರ ಬೆಳಗ್ಗೆ 8:50ಕ್ಕೆ ನವದೆಹಲಿಯಿಂದ ವಿಶೇಷ ವಿಮಾನ ಮೂಲಕ ಬೀದರ್ ವಾಯು ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 10:50ಕ್ಕೆ ಬಂದು ತಲುಪುವರು. ತದನಂತರ ಅಲ್ಲಿಂದೆ ಹೆಲಿಕ್ಯಾಪ್ಟರ್ ಮೂಲಕ ಕಲಬುರಗಿ ಮಹಾನಗರಕ್ಕೆ ಬೆಳಿಗ್ಗೆ 11.35ಕ್ಕೆ ಆಗಮಿಸುವರು. ಬೆಳಿಗ್ಗೆ 11.45 ರಿಂದ ಮಧ್ಯಾಹ್ನ 12 ವರೆಗೆ ಆಯುಷ್ಮಾನ ಭಾರತ ಫಲಾನುಭವಿಗಳೊಂದಿಗೆ ಸಂವಾದ ನಡೆಸುವರು. ತದನಂತರ 10 ನಿಮಿಷಗಳ ಕಾಲ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವರು.
ಶಿವರಾತ್ರಿ ಹಬ್ಬದ ಶುಭ ಸಂದರ್ಭದಲ್ಲಿ ಕಲ್ಯಾಣ ನಾಡಿನ ಹೆಬ್ಟಾಗಿಲು ಕಲಬುರಗಿಗೆ ಆಗಮಿಸುತ್ತಿರುವುದರಿಂದ ಪಕ್ಷದಲ್ಲಿ ಉತ್ಸಾಹ ಇಮ್ಮಡಿಗೊಂಡಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.
Related Articles
Advertisement
ಕಳೆದ ಮೇ 3ರಂದು ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಆಗಮಿಸಿ ಇದೇ ಕಲಬುರಗಿ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ನಡೆದ ಪ್ರಚಾರಸಭೆಯಲ್ಲಿ ಜನತೆಯನ್ನು ಉದ್ದೇಶಿಸಿ ಭಾಷಣ ಮಾಡಿದ್ದರು. ಈಗಲೂ ಅದೇ ಮೈದಾನದಲ್ಲಿ ಬೃಹತ್ ರ್ಯಾಲಿ ಹಾಗೂ ಭಾರಿ ಪ್ರಚಾರ ಸಭೆಯನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ. ಒಟ್ಟಾರೆ ಕಲ್ಯಾಣ ಕರ್ನಾಟಕದ ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯಿಂದಪ್ರತಿ ಕ್ಷೇತ್ರದಿಂದ ಸಹಸ್ರಾರು ಜನ ಪಾಲ್ಗೊಳ್ಳಲಿದ್ದು, ಐತಿಹಾಸಿಕತೆಗೆ ಸಾಕ್ಷಿಯಾಗಲಿದ್ದಾರೆ. ಕಲಬುರಗಿದು ನಾಲ್ಕನೇ ಭೇಟಿ: ಪ್ರಧಾನಿ ನರೇಂದ್ರ ಮೋದಿ ಚುನಾವಣೆಂದು ಕಲಬುರಗಿಗೆ ಭೇಟಿ ನೀಡುತ್ತಿರುವುದು ಇದು ನಾಲ್ಕನೇ ಬಾರಿಯಾಗಿದೆ. 2008ರ ಸಾರ್ವತ್ರಿಕ ವಿಧಾನಸಭೆ ಚುನಾವಣಾ ಪ್ರಚಾರಕ್ಕಾಗಿ ಪ್ರಥಮ ಸಲ ಕಲಬುರಗಿಗೆ ಆಗಮಿಸಿದ್ದರು. ಪ್ರತಿಯೊಂದು ಸಲ ಭೇಟಿ ನೀಡಿದಾಗ ಮಾಡಿರುವ ಭಾಷಣ ಹಾಗೂ ಮಾತುಗಳನ್ನು ಇಲ್ಲಿಯ ಜನ ಇನ್ನೂ ನೆನಪಿಸಿಕೊಳ್ಳುತ್ತಾರೆ. 2008ರ ಸಾರ್ವತ್ರಿಕ ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರ ವೇಳೆ ಕಲಬುರಗಿ ನಗರದ ಖೂಬಾ ಪ್ಲಾಟ್ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿರುವುದನ್ನು ಇನ್ನೂ ಜನಮಾಸದಿಂದ ಮಾಸಿಯೇ ಇಲ್ಲ. ಇನ್ನೂ ಗುಂಯ್ ಕುಟ್ಟುತ್ತಿವೆ.
ಕಲಬುರ್ಗಿ ದಕ್ಷಿಣ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ ಪಾಟೀಲ ರೇವೂರ ಹಾಗೂ ಕಲಬುರ್ಗಿ ಉತ್ತರ ಮತಕ್ಷೇತ್ರದ ಅಭ್ಯರ್ಥಿ ಬಿ.ಜಿ. ಪಾಟೀಲ ಪರ ಚುನಾವಣಾ ಪ್ರಚಾರ ಮಾಡಿದ್ದರು. ಅದೇ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಲಬುರಗಿ ದಕ್ಷಿಣ ಕ್ಷೇತ್ರದಲ್ಲಿ ಚಂದ್ರಶೇಖರ ಪಾಟೀಲ ರೇವೂರ 14290 ಮತಗಳ ಅಂತರದಿಂದ ಎರಡನೇ ಬಾರಿಗೆ ಚುನಾಯಿತರಾದರು. ತದನಂತರ 2014ರ ಫೆ. 28ರಂದು ಲೋಕಸಭಾ ಚುನಾವಣೆ ಮುಂಚೆ ಪ್ರಧಾನಿ ಅಭ್ಯರ್ಥಿ ಎಂಬುದಾಗಿ ಘೋಷಣೆಯಾದ ನಂತರ ಕಲಬುರಗಿಗೆ ಆಗಮಿಸಿ ಇಲ್ಲಿನ ಜೇವರ್ಗಿ ರಸ್ತೆಯ ಅಟಲ್ ಬಿಹಾರಿ ವಾಜಪೇಯಿ ಜಿಡಿಎ ಬಡಾವಣೆಯಲ್ಲಿ ಬೀದರ್, ಕಲಬುರಗಿ, ರಾಯಚೂರು ಲೋಕಸಭಾ
ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು. ಆಗ ಗುಜರಾತ್ ರಾಜಧಾನಿ ಗಾಂಧಿನಗರದಿಂದ ವಿಮಾನ ಮೂಲಕ ಬೀದರ್‌ಗೆ ಬಂದಿಳಿದು, ತದನಂತರ ಹೆಲಿಕ್ಯಾಪ್ಟರ್ ಮೂಲಕ ಕಲಬುರಗಿಗೆ ಬಂದಿದ್ದರು. ಅದೇ ರೀತಿ ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ 2018ರ ಮೇ. 3ರಂದು ಕಲಬುರಗಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರ ಮಾಡಿ ಸೂರ್ಯನಷ್ಟೇ ಪ್ರಖರ ಭಾಷಣ ಮಾಡಿದ್ದರು. ಆ ಸಂದರ್ಭದಲ್ಲಿ ದಲಿತರ ಮತಗಳನ್ನು ಪಡೆದ ಕಾಂಗ್ರೆಸ್ ಪಕ್ಷವು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡದೇ ಪಕ್ಷ ಅವರನ್ನು ಕೈ ಕೊಟ್ಟಿದೆ ಎಂದು ಅನುಕಂಪದ ಮಾತುಗಳನ್ನಾಡಿದ್ದರು. ಆದರೆ ಈ ಸಲ ಪ್ರಚಾರಕ್ಕೆ ಬಂದು ಏನು ಹೇಳ್ತಾರೆ ಎಂಬುದು ಕುತೂಹಲ ಮೂಡಿಸಿದೆ.