Advertisement

ಗುಂಡ್ಲುಪೇಟೆ : ಸ್ನಾನಕ್ಕೆ ಹೋದ ವ್ಯಕ್ತಿ ಕೆರೆಯಲ್ಲಿ ಮುಳುಗಿ ಸಾವು

12:28 PM Oct 25, 2022 | Team Udayavani |

ಗುಂಡ್ಲುಪೇಟೆ (ಚಾಮರಾಜನಗರ): ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಪಟ್ಟಣದ ಹೊರ ವಲಯದ ವಿಜಯಪುರ ಅಮ್ಮಾನಿಕೆರೆಯಲ್ಲಿ ನಡೆದಿದೆ.

Advertisement

ಪಟ್ಟಣದ ಕೆ.ಎಸ್.ನಾಗರತ್ನಮ್ಮ ಬಡಾವಣೆಯ ರಾಜು(35) ಮೃತ ವ್ಯಕ್ತಿ. ಈತ ವಿಜಯಪುರ ಅಮ್ಮಾನಿ ಕೆರೆಯಲ್ಲಿ ಸ್ಥಾನ ಮಾಡಲು ಹೋಗಿ ಕೆರೆಯ ತಟದ ಚಾನಲ್ ಬಳಿ ಬಟ್ಟೆ ತೊಳೆಯುತ್ತಿದ್ದ ಸಂದರ್ಭದಲ್ಲಿ ಕೆರೆಗೆ ಇಳಿದಿದ್ದಾನೆ. ಆ ವೇಳೆ ಕೆಸರಿನಲ್ಲಿ ಕಾಲು ಸಿಕ್ಕಿ ಹಾಕಿಕೊಂಡು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿ ಬಾರ್ ಬೆಂಡಿಂಗ್ ಕೆಲಸ ಮಾಡಿಕೊಂಡಿದ್ದ ಎನ್ನಲಾಗುತ್ತಿದೆ.

ವಿಷಯ ತಿಳಿದ ಗುಂಡ್ಲುಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮೃತದೇಹವನ್ನು ಪಟ್ಟಣದ ಸಾರ್ವಜನಿಕರ ಆಸ್ಪತ್ರೆಯ ರವಾನಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.

ಈ ಕುರಿತು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಸೈಕಾಲಜಿಕಲ್‌ ಥ್ರಿಲ್ಲರ್‌ ‘ಆದ್ಯಂತ’ ಚಿತ್ರದ ಮೂಲಕ ರೀ-ಎಂಟ್ರಿ ಕೊಟ್ಟ ಮಯೂರಿ

Advertisement
Advertisement

Udayavani is now on Telegram. Click here to join our channel and stay updated with the latest news.

Next