Advertisement

Gundlupete: ಎರಡು ಬೈಕ್ ಗಳ ನಡುವೆ ಅಪಘಾತ; ಇಬ್ಬರು ಸಾವು

03:04 PM Oct 20, 2024 | Team Udayavani |

ಗುಂಡ್ಲುಪೇಟೆ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಚೌಡಹಳ್ಳಿ ಗ್ರಾಮದ ಸಮೀಪದಲ್ಲಿ ಭಾನುವಾರ (ಅ.20) ನಡೆದಿದೆ.

Advertisement

ತಾಲೂಕಿನ ಚೌಡಹಳ್ಳಿ ಗ್ರಾಮದ ಶಿವಯ್ಯ(56) ಹಾಗೂ ಹುಂಡಿಪುರ ಗ್ರಾಮದ ಅಜೀತ್(22) ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಚೌಡಹಳ್ಳಿ ಗ್ರಾಮದ ಚಂದು ಎಂಬಾತನಿಗೆ ತೀವ್ರ ಗಾಯಗಳಾದ ಹಿನ್ನೆಲೆ ಆಸ್ಪತ್ರೆಗೆ ರವಾನಿಸಲಾಗಿದೆ.

ಚೌಡಹಳ್ಳಿ ಗ್ರಾಮದ ತಿರುವಿನಲ್ಲಿ ಎರಡು ಬೈಕ್ ಗಳು ವೇಗವಾಗಿ ಚಲಿಸುತ್ತಿದ್ದ ಪರಿಣಾಮ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎನ್ನಲಾಗುತ್ತಿದೆ.

ಘಟನಾ ಸ್ಥಳಕ್ಕೆ ಗುಂಡ್ಲುಪೇಟೆ ಠಾಣೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಮೃತ ದೇಹಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿ, ಎರಡು ಬೈಕ್ ಗಳನ್ನು ವಶಕ್ಕೆ ಪಡೆದು ಕೊಂಡಿದ್ದಾರೆ. ಇನ್ನೂ ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next