ಗುಂಡ್ಲುಪೇಟೆ: ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಅಗ್ನಿಪಥ ಯೋಜನೆ ವಿರೋಧಿಸಿ ಬೇಗೂರು, ಗುಂಡ್ಲುಪೇಟೆ ಬ್ಲಾಕ್ ಕಾಂಗ್ರೆಸ್‌ನಿಂದ ಮೌನ ಧರಣಿ ಸತ್ಯಾಗ್ರಹ ನಡೆಸಲಾಯಿತು. ಪಟ್ಟಣದ ಕಾಂಗ್ರೆಸ್ ಕಚೇರಿ ಮೂಲಕ ಸಾಗಿದ ಪ್ರತಿಭಟನಾಕಾರರು, ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ರಸ್ತೆ ತಡೆದು ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಕೂಡಲೇ ಅಗ್ನಿಪಥ್ ಯೋಜನೆ ಹಿಂಪಡೆಯಬೇಕು ಎಂದು ಆಕ್ರೋಶ ಹೊರಹಾಕಿ, ತಾಲೂಕು ಕಚೇರಿ ಮುಂದೆ ಸಮಾವೇಶಗೊಂಡರು.
ಕಾಂಗ್ರೆಸ್ ಮುಖಂಡ ಎಚ್.ಎಂ.ಗಣೇಶಪ್ರಸಾದ್ ಮಾತನಾಡಿ, ಬಿಜೆಪಿ ಸರ್ಕಾರ ಯುವಕರಿಗೆ ಉದ್ಯೋಗ ಕೊಡಲು ಆಗದೆ, ಅಗ್ನಿಪಥ್ ಯೋಜನೆ ಹೆಸರಿನಲ್ಲಿ ನಾಟಕವಾಡುತ್ತಿದೆ. ಈಗಾಗಲೇ ಯೋಜನೆ ವಿರೋಧಿಸಿ ವಿವಿಧ ರಾಜ್ಯದಲ್ಲಿ ಯುವಕರು ಧಂಗೆ ಎದ್ದಿದ್ದಾರೆ. ಇದರಲ್ಲಿ ಒಳಿತಿಗಿಂತ ಕೆಡಕು ಜಾಸ್ತಿಯಿದೆ ಎಂದು ಆಕ್ರೋಶ ಹೊರಹಾಕಿದರು. ಸತ್ಯಾಗ್ರಹಕ್ಕೆ ಸ್ಥಳಕ್ಕಾಗಮಿಸಿದ ತಹಶೀಲ್ದಾರ್ ಸಿ.ಜೆ.ರವಿಶಂಕರ್‌ಗೆ ಮುಖಂಡರು ಮನವಿ ಸಲ್ಲಿಸಿದರು.
ಕಾಡ ಮಾಜಿ ಅಧ್ಯಕ್ಷ ಎಚ್.ಎಸ್ .ನಂಜಪ್ಪ, ಚಾಮುಲ್ ನಿರ್ದೇಶಕ ಎಚ್.ಎಸ್ .ನಂಜುಂಡಪ್ರಸಾದ್, ಜಿಪಂ ಮಾಜಿ ಸದಸ್ಯ ಕೆ.ಎಸ್. ಮಹೇಶ್, ಬ್ಲಾಕ್ ಅಧ್ಯಕ್ಷ ಪಿ.ಬಿ.ರಾಜಶೇಖರ್, ಬಿ.ಎಂ. ಮುನಿರಾಜು, ಟಿಎಪಿಸಿಎಂಎಸ್ ಅಧ್ಯಕ್ಷ ಆಲತ್ತೂರು ಜಯರಾಂ, ಎಪಿಎಂಸಿ ಸದಸ್ಯ ಆರ್.ಎಸ್.ನಾಗರಾಜು, ಬಿ.ಕುಮಾರಸ್ವಾಮಿ, ಪುರಸಭೆ ಸದಸ್ಯ ಎನ್.ಕುಮಾರ್, ಮಧುಸೂದನ್, ಮಾಜಿ ಸದಸ್ಯ ಎಲ್.ಸುರೇಶ್, ಬೆಟ್ಟದಮಾದಹಳ್ಳಿ ಮಹದೇವಸ್ವಾಮಿ, ಯೂತ್ ಕಾಂಗ್ರೆಸ್ ಅಧ್ಯಕ್ಷ ಗುರುಪ್ರಸಾದ್, ಎಪಿಎಂಸಿ ಮಾಜಿ ಅಧ್ಯಕ್ಷ ಮೃತ್ಯುಂಜಯ, ತಾಪಂ ಮಾಜಿ ಉಪಾಧ್ಯಕ್ಷ ಜಯಂತಿ, ತಾಪಂ ಮಾಜಿ ಸದಸ್ಯ ಬೆಟ್ಟಹಳ್ಳಿ ಕೆಂಪರಾಜು, ಸೋಮಹಳ್ಳಿ ವಿಷಕಂಠಮೂರ್ತಿ, ಗೋಪಾಲಪುರ ಲೋಕೇಶ್, ಮಡಹಳ್ಳಿ ಮಣಿ, ಶಿವಪುರ ಮಂಜಪ್ಪ, ಸಾಹುಲ್ ಹಮೀದ್, ದೇವರಹಳ್ಳಿ ಪ್ರಕಾಶ್, ಸುನಿಲ್, ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.