ಗುಂಡ್ಲುಪೇಟೆ(ಚಾಮರಾಜನಗರ): ಕುಡಿದ ಮತ್ತಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಟ್ಟಣದ ಹೊರ ವಲಯದ ಸ್ಮಶಾನ ಪಕ್ಕದಲ್ಲಿ ನಡೆದಿದೆ.
ತಾಲೂಕಿನ ಬಸವಾಪುರ ಗ್ರಾಮದ ನಾಗರಾಜು (55) ನೇಣಿಗೆ ಶರಣಾದ ವ್ಯಕ್ತಿ.
ಈತ ಕುಡಿದ ಅಮಲಿನಲ್ಲಿ ಪಟ್ಟಣದ ಹೊರ ವಲಯದ ಸ್ಮಶಾನಕ್ಕೆ ಹೊಂದಿಕೊಂಡಿರುವ ಸೇತುವೆ ಬಳಿಯ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗುಂಡ್ಲುಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ಕೆಳಕ್ಕಿಳಿಸಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ, ಮರಣೋತ್ತರ ಪರೀಕ್ಷೆ ನಡೆಸಿ ನಂತರ ಮೃತದೇಹವನ್ನು ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.
ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.