Advertisement

ಪಾರ್ವತಾಂಭ ಜಾತ್ರೆಯಲ್ಲಿ ರಥದ ಚಕ್ರ ಹರಿದ ಘಟನೆ : ಚಿಕಿತ್ಸೆ ಫಲಕಾರಿಯಾಗದೆ ಮತ್ತೋರ್ವ ಸಾವು

09:14 PM May 15, 2022 | Team Udayavani |

ಗುಂಡ್ಲುಪೇಟೆ(ಚಾಮರಾಜನಗರ): ತಾಲೂಕಿನ ಪಾರ್ವತಿ ಬೆಟ್ಟದಲ್ಲಿ ನಡೆದ ರಥೋತ್ಸವದಲ್ಲಿ ರಥದ ಚಕ್ರಕ್ಕೆ ಸಿಲುಕಿ ಕಾಲು ಮುರಿದು ಹೋಗಿದ್ದ ಕಂದೇಗಾಲದ ಸ್ವಾಮಿ(40) ಚಿಕಿತ್ಸೆ ಫಲಕಾರಿಯಾಗದೆ ಮೈಸೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

Advertisement

ರಥವು ಸ್ವಾಮಿ ಎಡಗಾಲಿನ ತೊಡೆ ಭಾಗದಲ್ಲಿ ಹರಿದ ಪರಿಣಾಮ ತೀವ್ರ ರಕ್ತಸ್ರಾವವಾಗಿತ್ತು. ಕೂಡಲೇ ಆತನನ್ನು ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ, ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಮೈಸೂರಿನ ಕೆ.ಆರ್.ಆಸ್ಪತ್ರೆಗೆ‌ ರವಾನೆ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಭಾನುವಾರ ರಾತ್ರಿ ಆಸ್ಪತ್ರೆಯಲ್ಲಿ ಮರಣ ಹೊಂದಿದ್ದಾರೆ.

ಘಟನೆಯಲ್ಲಿ ಕಂದೇಗಾಲ ಗ್ರಾಮದ ಸರ್ಪಭೂಷಣ್(27) ಹಾಗೂ ಸ್ವಾಮಿ(40) ಇಬ್ಬರು ಸಾವನ್ನಪ್ಪಿದ್ದಾರೆ. ಕೊಡಸೋಗೆ ಗ್ರಾಮದ ಕರಿಯಪ್ಪ(50) ಮತ್ತು ಮಲ್ಲಿಕಾರ್ಜುನ(26) ಇಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ : ಶಿವಮೊಗ್ಗ: ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next