Advertisement

Gundlupete: ಟ್ರ್ಯಾಕ್ಟರ್ ನಲ್ಲಿ ಅಕ್ರಮವಾಗಿ ಸ್ಫೋಟಕ ವಸ್ತು ಸಾಗಣೆ… ಇಬ್ಬರ ಬಂಧನ

06:58 PM Sep 11, 2024 | Team Udayavani |

ಗುಂಡ್ಲುಪೇಟೆ(ಚಾಮರಾಜನಗರ): ಸ್ಫೋಟಕ ವಸ್ತುಗಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ಸ್ಫೋಟಕ ವಸ್ತುಗಳು ಮತ್ತು ಸಾಗಣೆ ಮಾಡುತ್ತಿದ್ದ ಟ್ರ್ಯಾಕ್ಟರ್ ಅನ್ನು ವಶಪಡಿಸಿಕೊಂಡಿರುವ ಘಟನೆ ತಾಲೂಕಿನ ತೆರಕಣಾಂಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಚಾಮರಾಜನಗರ ತಾಲೂಕಿನ ಬಿ.ಜಿ.ಕಾಲೋನಿ ಗ್ರಾಮದ ಸಿದ್ದರಾಮು(43), ರಾಜ(50) ಬಂಧಿತರು. ಇವರು ಟ್ರ್ಯಾಕ್ಟರ್ ನಲ್ಲಿ ಅಕ್ರಮವಾಗಿ ಸ್ಫೋಟಕ ವಸ್ತುಗಳನ್ನು ಇಟ್ಟುಕೊಂಡು ಜಮೀನಿನಲ್ಲಿ ಕಲ್ಲುಗಳನ್ನು ಸ್ಫೋಟಿಸುತಿದ್ದಾರೆ ಎಂಬ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ಅವರು ನಿರ್ದೇಶನ ನೀಡಿದ್ದ ಹಿನ್ನೆಲೆಯಲ್ಲಿ ಪೊಲೀಸರ ತಂಡ ಕುರುಬರಹುಂಡಿ ಗ್ರಾಮದಲ್ಲಿ ಗಸ್ತಿನಲ್ಲಿದ್ದಾಗ ಇಬ್ಬರು ಆಸಾಮಿಗಳು ವ್ಯಕ್ತಿಗಳು ಟ್ರ್ಯಾಕ್ಟರ್ ನಲ್ಲಿ ಬಂದಿದ್ದಾರೆ. ಈ ವೇಳೆ ಅವರನ್ನು ತಡೆದು ವಿಚಾರಿಸಿದಾಗ ಜಮೀನುಗಳಲ್ಲಿ ಸಣ್ಣಕಲ್ಲು ಬಂಡೆಗನ್ನು ಬ್ಲಾಸ್ಟ್ ಮಾಡಿಕೊಡಲು ಹೋಗುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಬಳಿಕ ಪೊಲೀಸರು ಟ್ರ್ಯಾಕ್ಟರ್ ಪರಿಶೀಲನೆ ನಡೆಸಿದಾಗ ಟ್ರ್ಯಾಕ್ಟರ್ ನಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ.

ಘಟನೆಗೆ ಸಂಬಂಧಿಸಿ ಇಬ್ಬರನ್ನು ವಶಕ್ಕೆ ಪಡೆದಿದ್ದು ಟ್ರ್ಯಾಕ್ಟರ್ ಸಮೇತ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿ ತೆರಕಣಾಂಬಿ ಠಾಣೆ ಸಬ್ ಇನ್ಸ್ ಪೆಕ್ಟರ್ ಕೆ.ಎಂ.ಮಹೇಶ್ ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

ಇದನ್ನೂ ಓದಿ: CM Post: ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಸಂಶಯಬೇಡ ನಾನೇ ಮುಂದುವರಿಯುವೆ: ಸಿದ್ದರಾಮಯ್ಯ

Advertisement
Advertisement

Udayavani is now on Telegram. Click here to join our channel and stay updated with the latest news.

Next