ಗುಂಡ್ಲುಪೇಟೆ(ಚಾಮರಾಜನಗರ): ಕೃಷಿ ಹೊಂಡದಲ್ಲಿ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟಿರುವ ದುರ್ಘಟನೆ ತಾಲೂಕಿನ ತ್ರಯಂಬಕಪುರ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ನಡೆದಿದೆ.
ತ್ರಯಂಬಕಪುರ ಗ್ರಾಮದ ಮಹದೇಸ್ವಾಮಿ(40) ಮೃತ ವ್ಯಕ್ತಿಯಾಗಿದ್ದು, ಈತ ಕಾಳಶೆಟ್ಟಿ ಎಂಬುವವರ ಜಮೀನಿನಲ್ಲಿ ನಿರ್ಮಿಸಿದ್ದ ಕೃಷಿಹೊಂಡದಲ್ಲಿ ನೀರು ಕುಡಿಯಲು ಹೋಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ ಎನ್ನಲಾಗುತ್ತಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ತೆರಕಣಾಂಬಿ ಠಾಣೆ ಪೊಲೀಸರು ಮೃತ ದೇಹವನ್ನು ಕೃಷಿಹೊಂಡದಿಂದ ಮೇಲೆತ್ತಿ ಮರಣೋತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.
ಈ ಕುರಿತು ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.