ಗುಂಡ್ಲುಪೇಟೆ(ಚಾಮರಾಜನಗರ): ಸಾಲಬಾಧೆಯಿಂದ ಬೇಸತ್ತು ವ್ಯಕ್ತಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಶಿವಪುರ ಕಲ್ಲುಕಟ್ಟೆ ಜಲಾಶಯದಲ್ಲಿ ಮಂಗಳವಾರ (ಜ.17) ನಡೆದಿದೆ.
ವಡ್ಡನಹೊಸಹಳ್ಳಿ ಗ್ರಾಮದ ಸಿದ್ದರಾಜು (42) ಮೃತ ವ್ಯಕ್ತಿ.
ಈತ ಪ್ಲೈವುಡ್ ಅಂಗಡಿ ಇಟ್ಟುಕೊಂಡಿದ್ದ ಎಂದು ತಿಳಿದು ಬಂದಿದ್ದು, ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ಎನ್ನಲಾಗುತ್ತಿದೆ. ಸಾಲಗಾರರ ಕಿರುಕುಳ ತಾಳಲಾರದೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಗುಂಡ್ಲುಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮೃತ ಸಿದ್ದರಾಜು ಚಪ್ಪಲಿ ಹಾಗೂ ಬೈಕ್ ಕೆರೆ ಏರಿ ಮೇಲೆ ನಿಲ್ಲಿಸಿರುವುದು ಕಂಡು ಬಂದಿದೆ.
Related Articles
ನಂತರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಬಂದು ಸುಮಾರು ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಬಳಿಕ ಶವವನ್ನು ಮೇಲೆತ್ತುವ ಕೆಲಸ ಮಾಡಿದ್ದಾರೆ.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮೃತ ದೇಹ ರವಾನಿಸಲಾಗಿದ್ದು, ಗುಂಡ್ಲುಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.