Advertisement

Gundlupete; ಓವರ್ ಟೇಕ್ ಭರದಲ್ಲಿ ಅಪಘಾತ: ಬೈಕ್ ಸವಾರ ಮೃತ್ಯು

11:34 PM May 11, 2024 | Team Udayavani |

ಗುಂಡ್ಲುಪೇಟೆ(ಚಾಮರಾಜನಗರ): ಓವರ್ ಟೇಕ್ ಮಾಡುವ ಭರದಲ್ಲಿ ಟ್ರ್ಯಾಕ್ಟರ್ ಹಾಗೂ ಕಾರಿಗೆ ಗುದ್ದಿದ ಪರಿಣಾಮ ಬೈಕ್ ಸವಾರನೋರ್ವ ಮೃತ ಪಟ್ಟಿರುವ ಘಟನೆ ಪಟ್ಟಣದ ಹೊರವಲಯದ ಕೇರಳ ರಸ್ತೆಯ ಸಿದ್ದಗಂಗಾ ಪೆಟ್ರೋಲ್ ಬಂಕ್ ಬಳಿಯಲ್ಲಿ ಶನಿವಾರ ನಡೆದಿದೆ.

Advertisement

ತಾಲೂಕಿನ ಮಲ್ಲಯ್ಯನಪುರ ಗ್ರಾಮದ ಸಿದ್ದಪ್ಪಾಜಿ(21) ಮೃತ ಬೈಕ್ ಸವಾರ. ಈತ ಗುಂಡ್ಲುಪೇಟೆ ಪಟ್ಟಣದಿಂದ ಸ್ವಗ್ರಾಮಕ್ಕೆ ಬೈಕ್ ನಲ್ಲಿ ತೆರಳುವ ವೇಳೆ ಮುಂಬದಿಯಲ್ಲಿ ಚಲಿಸುತ್ತಿದ್ದ ಟ್ರ್ಯಾಕ್ಟರ್ ಓವರ್ ಟೇಕ್ ಮಾಡುವ ಬರದಲ್ಲಿ ತಾಗಿಸಿ ಎದುರಿಗೆ ಬರುತ್ತಿದ್ದ ಕಾರಿಗೆ ಗುದ್ದಿದ್ದಾನೆ ಎನ್ನಲಾಗುತ್ತಿದ್ದು, ಮುಖಕ್ಕೆ ತೀವ್ರ ಪೆಟ್ಟು ಬಿದ್ದ ಪರಿಣಾಮ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೃತದೇಹ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿದ್ದು, ಸ್ಥಳಕ್ಕೆ ಗುಂಡ್ಲುಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ವಾಹನವನ್ನು ವಶಕ್ಕೆ ಪಡೆದು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next